ಬೆಂಗಳೂರು: ಇಂದು ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ರೈತರು ಹಾಗೂ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದ್ದಾರೆ.
ಈ ವೇಳೆ ಮಾತನಾಡಿರುವ ಬಿಎಸ್ ವೈ ಆರು ತಿಂಗಳಲ್ಲಿ ರೈತರಿಗೆ ಯಾವ ರೀತಿ ಒಳ್ಳೆಯದು ಆಗುತ್ತದೆ ಎಂಬುದನ್ನು ನೋಡಿ. ನಾನು ರೈತನ ಮಗ, ಅನ್ನ ಕೊಡುವ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅಧಿಕಾರಕ್ಕೆ ಅಂಟಿಕೊಂಡು ಕೂರುವವನು ಅಲ್ಲ. ನನ್ನ ಬೆಳೆ, ನನ್ನ ಹಕ್ಕು. ರೈತ ಈಗ ತಾನು ಬೆಳೆಯುವ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು . ಈ ಸಂದರ್ಭದಲ್ಲಿ ಅನಾವಶ್ಯಕವಾಗಿ ಬೇರೆ ರೈತರನ್ನು ಗೊಂದಲಕ್ಕೆ ಒಳಗಾಗುವಂತೆ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಅಲ್ಲದೇ ನಾನು ನಿಮ್ಮ ಜೊತೆ ಇದ್ದೇನೆ. ನಿಮ್ಮ ಹಿತಕ್ಕೆ ಧಕ್ಕೆ ಆಗುವ ಕೆಲಸ ಮಾಡುವುದಿಲ್ಲ. ಈ ಕಾಯ್ದೆಯಿಂದ ಮಧ್ಯವರ್ತಿಗಳ ಹಾವಳಿ ತಪ್ಪಿಸಬಹುದು. ಇನ್ನೂ ಎಪಿಎಂಸಿ ಪೂರ್ಣ ಬಾಗಿಲು ಮುಚ್ಚಿಲ್ಲ. ಎಪಿಎಂಸಿಯಲ್ಲೂ ರೈತರು ಮಾರಾಟ ಮಾಡಬಹುದು ಎಂದು ತಿಳಿಸಿದರು.