ಬೆಂಗಳೂರು: ಸಂಪುಟ ವಿಸ್ತರಣೆಗೆಂದು ಕಳೆದ ಒಂದು ವರ್ಷದಿಂದ ಹರಸಾಹಸ ನಡೆಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ವರಿಷ್ಠರ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 8.30ಕ್ಕೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಿಎಂ ಬಿಎಸ್ವೈ ದೆಹಲಿಗೆ ತೆರಳುತ್ತಿರುವ ವಿಚಾರವನ್ನು ಮುಖ್ಯಮಂತ್ರಿಗಳ ಸಚಿವಾಲಯ ದೃಢಪಡಿಸಿದೆ.
ಬಿಎಸ್ವೈ ದೆಹಲಿಗೆ ತೆರಳುತ್ತಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಂಕ್ರಾಂತಿ ಬಳಿಕ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರು ಹಾಗೂ ಬೆಳಗಾವಿ, ಕೊಪ್ಪಳ ಜಿಲ್ಲೆಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆಗೆ ಒಂದು ವರ್ಷದಿಂದ ಹಸಿರು ನಿಶಾನೆ ನೀಡದೆ, ಸಿಎಂ ಯಡಿಯೂರಪ್ಪ ಅವರನ್ನು ಖುದ್ದು ಭೇಟಿ ಮಾಡದೇ ದೂರವೇ ಉಳಿದಿದ್ದ ಅಮಿತ್ ಶಾ, ರಾಜ್ಯಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಕರೆಸಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೀಗಾಗಿ ಬಿಎಸ್ವೈ ಸಂಪುಟ ಸೇರಲು ಒಂದು ವರ್ಷದಿಂದ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಶಾಸಕರಿಗೆ ಸಂಕ್ರಾಂತಿಯ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಅಮಿತ್ ಶಾ ಅವರೇ ಯಡಿಯೂರಪ್ಪ ಅವರಿಗೆ ಬುಲಾವ್ ನೀಡಿರುವುದು ಕುತೂಹಲ ಮೂಡಿಸಿದೆ.
ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿರುವ ಎಂಟಿಬಿ ನಾಗರಾಜ್, ಆರ್ ಶಂಕರ್, ಮುನಿರತ್ನ ಹಾಗೂ ಉಮೇಶ್ ಕತ್ತಿ, ಸಿ.ಪಿ ಯೋಗೇಶ್ವರ್ ಕ್ಯಾಬಿನೆಟ್ಗೆ ಸೇರಿಸಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ನಿರಂತರ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಇವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಅಮಿತ್ ಶಾರಿಂದ ಒಪ್ಪಿಗೆ ಪಡೆಯುತ್ತಾರಾ ಇಲ್ಲವಾ ಎಂಬುದು ಕುತೂಹಲ ಹೆಚ್ಚಿಸಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮತ್ತೊಂದೆಡೆ, ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚನೆ ನೀಡಿರುವುದರ ಜತೆಗೆ ಯಡಿಯೂರಪ್ಪ ಅವರಿಗೆ 25 ಸಾವಿರ ದಂಡ ವಿಧಿಸಿರುವ ಬಗ್ಗೆ ಕೂಡ ಹೈಕಮಾಂಡ್ ವಿವರಣೆ ಕೇಳುವ ಸಾಧ್ಯತೆ ಇದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








