ಯಾರು ಏನೇ ಟೀಕೆ ಮಾಡಿದ್ರೂ ಜನ ನಮ್ಮ ಪರ : ಬಿಎಸ್ ವೈ
ಶಿವಮೊಗ್ಗ : ಕಾಂಗ್ರೆಸ್ ಹಾಗೂ ಇತರೆ ಪಕ್ಷದವರು ಏನೇ ಟೀಕೆ ಟಿಪ್ಪಣಿ ಮಾಡಿದರೂ ಜನ ನಮ್ಮ ಪರವಾಗಿದ್ದಾರೆ.
ಎರಡೂ ಉಪಚುನಾವಣೆಯಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ತಮ್ಮ ಪುತ್ರ ವಿಜಯೇಂದ್ರ ಅವರ ಕಿಯಾ ಕಾರು ಶೋ ರೂಂ ಉದ್ಘಾಟನೆಗಾಗಿ ಶಿವಮೊಗ್ಗಗೆ ಭೇಟಿ ನೀಡಿರುವ ಸಿಎಂ, ಸುದ್ದಿಗಾರರೊಂದಿಗೆ ಮಾತನಾಡಿ, ಈ ಮೊದಲು ಹೇಳಿದಂತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ.
ಕಾಂಗ್ರೆಸ್ ಹಾಗು ಇತರೆ ಪಕ್ಷದವರು ಏನೇ ಟೀಕೆ-ಟಿಪ್ಪಣಿ ಮಾಡಿದರೂ ಕೂಡ ಜನ ನಮ್ಮ ಪರವಾಗಿ ಇದ್ದಾರೆ.
ಸರ್ಕಾರ ನೌಕರರನ್ನು ತನ್ನ ಗುಲಾಮರನ್ನಾಗಿ ಭಾವಿಸಿದೆ : ಸಿದ್ದರಾಮಯ್ಯ
ಶಿರಾದಲ್ಲಿ ನಮ್ಮ ಪಕ್ಷ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ.
ಅದೇ ರೀತಿ ಆರ್ ಆರ್ ನಗರದಲ್ಲಿಯೂ ಸಹ 40 ಸಾವಿರ ಮತಗಳ ಅಂತರದಿಂದ ಗೆಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಬಿಹಾರ ಚುನಾವಣೆಗೆ ಮಾತನಾಡಿ, ಬಿಹಾರದಲ್ಲೂ ಕೂಡ ನಿತೀಶ್ ಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಬಿಎಸ್ವೈ ಭವಿಷ್ಯ ನುಡಿದರು.
ಶರಾವತಿ ಸಂತ್ರಸ್ತರ ಸಮಸ್ಯೆ ಹಲವು ವರ್ಷಗಳಿಂದ ಇದ್ದು, ಈ ಸಮಸ್ಯೆಗೆ ನ್ಯಾಯಯುತ ಪರಿಹಾರ ಕೊಡಲು ಸೂಚಿಸಿದ್ದೇನೆ.
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಂಸದರು, ಶಾಸಕರು ಭಾಗಿಯಾಗಿದ್ದರು.
ಸವದಿಯ `ಮೂರು ಬಾಗಿಲು’ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ
ಕಾಲಮಿತಿಯೊಳಗೆ ಸಮಸ್ಯೆಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel