ನಾನು ಸಿಎಂ ಬಗ್ಗೆ ಮಾತನಾಡಿದ್ರೆ ಬೆಂಕಿ ಹೊತ್ತಿಕೊಳ್ಳುತ್ತೆ : ಸಿ.ಪಿ.ಯೋಗೇಶ್ವರ್
ರಾಮನಗರ : ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ.
ಇದು ಸದ್ಯ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಮಧ್ಯೆ ಈ ಬಗ್ಗೆ ರಾಮನಗರದಲ್ಲಿ ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದು, ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಹಿಂದೆಯೂ ಮಾತನಾಡಿರಲಿಲ್ಲ, ಈಗಲೂ ಮಾತನಾಡುವುದಿಲ್ಲ, ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದಿದ್ದಾರೆ.
ಇಂದು ಮುಖ್ಯಮಂತ್ರಿ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ, ನಿಮ್ಮ ಮೂಲಕ ಕೇಳುತ್ತಿದ್ದೇನೆ, ನನಗೆ ಆ ಬಗ್ಗೆ ಸ್ಪಷ್ಟತೆ ಇಲ್ಲ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಶಕ್ತಿಮೀರಿ ಕೆಲಸ ಮಾಡುತ್ತಿದ್ದಾರೆ, ಕೋವಿಡ್-19 ನಿರ್ವಹಣೆಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ ಎಂದರು.
ಇನ್ನು ನಮ್ಮದು ರಾಷ್ಟ್ರೀಯ ಪಕ್ಷ, ಹೀಗಾಗಿ ವರಿಷ್ಠರು ಎಲ್ಲವನ್ನೂ ತೀರ್ಮಾನಿಸುತ್ತಾರೆ. ಯಾರು ಬೇಕು, ಬೇಡವೆಂದು ವರಿಷ್ಠರು ನಿರ್ಧರಿಸುತ್ತಾರೆ ಎಂದು ಸಿಪಿವೈ ಹೇಳಿದ್ದಾರೆ.