ಸಿಎಂ ಸುದ್ದಿಗೋಷ್ಠಿ: ವಿಶೇಷ ಪ್ಯಾಕೇಜ್, ಲಾಕ್‍ಡೌನ್ ವಿಸ್ತರಣೆ..?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಮತ್ತು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.
ಸ್ವತಃ ಸಚಿವರು ಕೂಡ ಲಾಕ್ ಡೌನ್ ವಿಸ್ತರಣೆ ಬಗ್ಗೆ ಒಲವು ತೋರಿದ್ದಾರೆ. ಇತ್ತ ವಿಪಕ್ಷಗಳು ಕೂಡ ಲಾಕ್ ಡೌನ್ ಗೆ ಒತ್ತಾಯಿಸಿವೆ.
ಈ ಎಲ್ಲಾ ಬೆಳವಣಿಗೆಗಳಿಗೆ ಮಧ್ಯೆ ಇಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ಕರೆದಿದ್ದಾರೆ.

ಮುಖ್ಯಮಂತ್ರಿಗಳು ಸುದ್ದಿಗೋಷ್ಠಿಗೂ ಮುನ್ನ ಹಿರಿಯ ಸಚಿವರ ಜೊತೆ ಸಭೆ ನಡೆಸಲಿದ್ದಾರೆ.
ನಾಳೆ ಸಿಎಂ ಯಡಿಯೂರಪ್ಪ ಲಾಕ್ ಡೌನ್ ವಿಸ್ತರಣೆ ಮತ್ತು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೇ 24 ರಿಂದ 31ರವರೆಗೆ ಲಾಕ್ ಡೌನ್ ವಿಸ್ತರಿಸಿ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಅದರ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆಗಳಿವೆ.









