ಕಲಬುರಗಿ: ಭೀಕರ ಪ್ರವಾಹದಿಂದ ನಲುಗಿರುವ ಉತ್ತರ ಕರ್ನಾಟಕದ ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿದರು.
ಬೆಂಗಳೂರಿನಿಂದ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಡಿಯೂರಪ್ಪ, ಅಲ್ಲಿಂದ ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಯ ಪ್ರವಾಹ ಪೀಡಿತ ಭೀಮಾ ನದಿಯಿಂದ ಪ್ರವಾಹಕ್ಕೀಡಾದ ಪ್ರದೇಶಗಳು, ಯಾದಗಿರಿಯ ಜಿಲ್ಲೆಯ ಕೃಷ್ಣಾ ನದಿತೀರದ ಪ್ರದೇಶಗಳಲ್ಲಿ ನೆರೆ ಪೀಡಿತ ಹಾಗೂ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿದರು.
ವೈಮಾನಿಕ ಸಮೀಕ್ಷೆ ಬಳಿಕ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬೀದರ್, ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಯಾದಗಿರಿ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಗೃಹಸಚಿವ ಬಸವರಾಜ ಬೊಮ್ಮಾಯಿ, ಪಶುಸಂಗೋಪನಾ ಸಚಿವ ಪ್ರಭುಚೌವ್ಹಾಣ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರವಾಹ ಪರಿಹಾರ ಮೊತ್ತ ಹೆಚ್ಚಿಸಿದ ಸರ್ಕಾರ..!
ಪ್ರವಾಹ ಪರಿಹಾರ ಮೊತ್ತ ಹೆಚ್ಚಿಸಿದ ಸರ್ಕಾರ..!
ಭೀಕರ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ಥರ ಪರಿಹಾರ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ನೆರೆಯಿಂದ ಮನೆಗಳಿಗೆ ಶೇ.75ಕ್ಕಿಂತ ಹೆಚ್ಚು ಹಾನಿಯಾಗಿದ್ದರೆ 5 ಲಕ್ಷ ರೂ ಪರಿಹಾರ ನೀಡಲು ಆದೇಶ ನೀಡಿದೆ. ಈ ಮೊದಲು 95,100 ಪರಿಹಾರ ನೀಡಲಾಗುತ್ತಿತ್ತು.
ಶೇ.25ರಿಂದ ಸೇ.75ರಷ್ಟು ಭಾಗಶಃ ಹಾನಿಯಾಗಿದ್ದರೆ ಹಳೆಯ ಮನೆಯನ್ನು ಕೆಡವಿ ಹೊಸ ಮನೆ ಕಟ್ಟಲು ಈ ಹಿಂದೆ ನೀಡುತ್ತಿದ್ದ 95,100 ರೂ. ಇದ್ದ ಪರಿಹಾರ ಮೊತ್ತವನ್ನು ಈಗ 5 ಲಕ್ಷಕ್ಕೆ, ಶೇ.25ಕ್ಕಿಂತ ಮೇಲ್ಪಟ್ಟು ಹಾನಿಯಾಗಿದ್ದರೆ ದುರಸ್ಥಿಗಾಗಿ 91 ಸಾವಿರ ಬದಲು 3 ಲಕ್ಷ ರೂ, ಶೇ.15ರಿಂದ ಶೇ.25ರಷ್ಟು ಅಲ್ಪಸ್ವಲ್ಪ ಹಾನಿಯಾಗಿದ್ದರೆ ಈ ಹಿಂದೆ 5200 ರೂ. ಪರಿಹಾರ ನೀಡಲಾಗುತ್ತಿತ್ತು. ಈಗ ಈ ಮೊತ್ತವನ್ನು 50 ಸಾವಿರ ಪರಿಹಾರ ನೀಡುವಂತೆ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ನಾಗರಾಜ್.ಎಸ್ ಆದೇಶ ಹೊರಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel