ಲಾಕ್ ಡೌನ್ ಬಗ್ಗೆ ಸಿಎಂ ಬಿಎಸ್ ವೈ ಸ್ಪಷ್ಟನೆ
ಬೀದರ್ : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ದಿನ ಐದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.
ಈ ಹಿನ್ನೆಲೆ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂಬ ಮಾತುಗಳು ಸಾರ್ವಜನಿಕ ವಲಯಗಳಲ್ಲಿ ಹರಿದಾಡುತ್ತಿವೆ.
ಸಚಿವರೂ ಕೂಡ ಲಾಕ್ ಡೌನ್ ಅನಿವಾರ್ಯ ಎಂಬಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಬೀದರ್ ನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆ ಇಲ್ಲ. ಕೊವೀಡ್ ನಿಯಂತ್ರಣಕ್ಕೆ 18 ರಂದು ಸರ್ವ ಪಕ್ಷಗಳ ಸಭೆ ಕರೆದಿದ್ದೇವೆ.
18 ರಂದು ಎಲ್ಲಾ ಪಕ್ಷದ ನಾಯಕರ ಜೊತೆ ಚೆರ್ಚ ಮಾಡಿ ನಿರ್ಧಾರ ಮಾಡುತ್ತೆವೆ. ಸಾರ್ವಜನಿಕರು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಬೇಕು.
ಸಲಹಾ ಸಮಿತಿ ಮೇ 2 ರಂದು ಕೊವೀಡ್ ಸಂಖ್ಯೆ ಜಾಸ್ತಿಯಾಗುತ್ತೆ ಎಂದು ಹೇಳಿದೆ ಎಂದು ಹೇಳಿದರು.
ಇನ್ನು ಸಾರಿಗೆ ನೌಕರರ ಮುಷ್ಕರದ ಬಗ್ಗೆ ಮಾತನಾಡಿ ಯಾವುದೇ ಕಾರಣಕ್ಕೂ ಸಾರಿಗೆ ನೌಕರರ ಷರತ್ತುಗಳನ್ನು ಒಪ್ಪಲ್ಲ. ಸಂಬಳನು ಕೊಡಲ್ಲ. ಇಗಾಗಲೇ 9 ರಲ್ಲಿ 8 ಷರತ್ತುಗಳನ್ನು ಒಪ್ಪಿದ್ದೇವೆ ಎಂದರು.









