ನನ್ನ ಆಡಳಿತ ಕಾಲದಲ್ಲಿ ಬಿಡುಗಡೆಯಾಗಿದ್ದ ಅನುದಾನಗಳನ್ನು ಕಡಿತಗೊಳಿಸಿದ್ದಾರೆ. ಈ ಮೂಲಕ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ನಾನು ಇದನ್ನು ಮುಂಬರುವ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ ಎಂದಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು. ಈ ಸರ್ಕಾರದಲ್ಲಿ ನಿರಂತರವಾಗಿ ದ್ವೇಷದ ರಾಜಕಾರಣ ನಡೆಯುತ್ತಿದೆ. ತಮಗೆ ಬೇಕಾದವರಿಗೆ ಮಾತ್ರ ಅನುಧಾನ ನೀಡಿ ಉಳಿದ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಈ ವಿಚಾರವನ್ನು ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ವೇಳೆ ಪ್ರಸ್ತಾಪ ಮಾಡುತ್ತೇನೆ. ಜೊತೆಗೆ ನನ್ನ ಕಾಲದಲ್ಲಿ ಕೊಟ್ಟಿರುವ ಎಲ್ಲಾ ಅನುದಾನಗಳ ಸ್ಥಗಿತಕ್ಕೆ ಕಾರಣ ಕೇಳುತ್ತೇನೆ ಎಂದರು.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








