ಬೆಂಗಳೂರು: ಬರೋಬ್ಬರಿ 10 ತಿಂಗಳ ಬಳಿಕ ರಾಜ್ಯದಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳ ಆರಂಭಕ್ಕೆ ಸರ್ಕಾರ ಸಜ್ಜಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ.
ಮಧ್ಯಾಹ್ನ 12.30ಕ್ಕೆ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಉನ್ನತಪಟ್ಟದ ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸೇರಿದಂತೆ ಶಿಕ್ಷಣ, ಆರೋಗ್ಯ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಜನವರಿ 1ರಿಂದ ಶಾಲೆ ಹಾಗೂ ಪಿಯು ಕಾಲೇಜುಗಳನ್ನು ಆರಂಭಿಸಬಹುದು ಎಂದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಈ ಶಿಫಾರಸು ಆಧರಿಸಿ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ಗೆ ಪತ್ರ ಬರೆದಿದ್ದಾರೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು, ಆರೋಗ್ಯ ಇಲಾಖೆ ಆಯುಕ್ತ ಪಂಕಜ್ಕುಮಾರ್ ಪಾಂಡೆ ಪತ್ರ ಹಾಗೂ ರಾಜ್ಯದ ಕೊರೊನಾ ಸ್ಥಿತಿಗತಿ ಅವಲೋಕಿಸಿ ಶಾಲೆಗಳನ್ನು ಆರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇಂದಿನ ಸಭೆ ಶಾಲೆಗಳನ್ನು ಆರಂಭಿಸುವ ವಿಚಾರದಲ್ಲಿ ಮಹತ್ವದ ಪಾತ್ರ ವಹಿಸಲಿದೆ.
ಜನವರಿ ಮೊದಲ ವಾರದಲ್ಲಿ ಭಾರತೀಯ ಕಂಪನಿಗಳೇ ಅಭಿವೃದ್ಧಿಪಡಿಸುತ್ತಿರುವ ಕೊರೊನಾ ಸಿಗುವ ಸಾಧ್ಯತೆ ಇದೆ. ಜತೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕೂಡ ಕುಸಿತ ಕಂಡಿದೆ. 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಿನ್ನೆ ಸೋಂಕಿತರ ಸಂಖ್ಯೆ ಶೂನ್ಯಕ್ಕೆ ಬಂದಿದೆ. ಹೀಗಾಗಿ ಮೊದಲಿಗೆ 8ನೇ ತರಗತಿಯಿಂದ ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಿ ಹಂತ ಹಂತವಾಗಿ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಅನುಮತಿ ಕೊಡುವ ಸಾಧ್ಯತೆ ಇದೆ.
ಈ ಎಲ್ಲಾ ಅಂಶಗಳನ್ನು ಆಧರಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಕೊರೊನಾ ಲಸಿಕೆ ಸಿಗುವ ದಿನಾಂಕ ಫಿಕ್ಸ್ ಆದ ಮೇಲೆ ಶಾಲೆ ಆರಂಭಕ್ಕೆ ಡೇಟ್ ನಿಗದಿ ಮಾಡುತ್ತಾರೋ ಎಂಬುದು ಈಗಿನ ಸದ್ಯದ ಕುತೂಹಲವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel