ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಕೇಂದ್ರ ಸರ್ಕಾರದಿಂದ ಸಮರ್ಪಕ ಪರಿಹಾರ ಕೇಳಲು ಮುಂದಿನ ವಾರ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿರುವುದು ಪರೋಕ್ಷವಾಗಿ ಸಂಪುಟ ವಿಸ್ತರಣೆ ಅಥವಾ ಸರ್ಜರಿ ಪ್ರಕ್ರಿಯೆಗೆ ಮತ್ತೆ ಚಾಲನೆ ಸಿಕ್ಕಿದೆ.
ಮುಂದಿನ ವಾರ ದೆಹಲಿಗೆ ಹೋಗುವ ವಿಚಾರವನ್ನು ಖುದ್ದು ಸಿಎಂ ಯಡಿಯೂರಪ್ಪ ಅವರೇ ತಿಳಿಸಿರುವುದು ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆ ಗರಿಗೆದರುವಂತೆ ಮಾಡಿದೆ.
ಆಗಸ್ಟ್.27ರಂದು ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಅವರ ಜತೆ ಹೆಚ್ಚಿನ ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಸಂಪುಟ ವಿಸ್ತರಣೆ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಿಎಂ ಯಡಿಯೂರಪ್ಪ ಮೋದಿ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಕೊರೊನಾ ಹಾಗೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕಳೆದ ಆರು ತಿಂಗಳಿಂದ ದೆಹಲಿ ಪ್ರವಾಸ ಮಾಡಿಲ್ಲ. ಇದೇ 27ರಂದು ನೆರೆ ಪರಿಹಾರ ಕೇಳುವ ನೆಪದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿರುವುದು ಕುತೂಹಲ ಹೆಚ್ಚಿಸಿದೆ.
ಒಂದೆಡೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಹಾಗೂ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಕುರಿತಂತೆ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಚಟುವಟಿಕೆಗಳು ಬಿರುಸುಗೊಂಡಿವೆ. ಬಿಜೆಪಿ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಈಗಾಗಲೇ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಕುರಿತಂತೆ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ವರದಿ ಸಿದ್ದಪಡಿಸಿಕೊಂಡು ದೆಹಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳುತ್ತಿರುವುದು ಊಹಾಪೋಹಗಳಿಗೆ ರೆಕ್ಕೆಪುಕ್ಕ ಬರುವಂತೆ ಮಾಡಿದೆ.
ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!
ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ ಸಾ’ವಿ’ನ ತನಕ ಬರುವ ಆತನ ಪಾಲಿಗೆ ಬರುವ ಕ’ಷ್ಟ, ಸುಖ, ದುಃ’ಖ ಗಂಡಾಂತರಗಳ ಬಗ್ಗೆ ಮಾಹಿತಿ ಕೊಡುತ್ತದೆ. ಇದು ನಮ್ಮ...








