ಬೆಂಗಳೂರು : 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. Rajyotsava saaksha tv
ರಾಜ್ಯೋತ್ಸವದ ಮುನ್ನಾ ದಿನವಾದ ನಿನ್ನೆ ಜನತೆಗೆ ಸಂದೇಶ ನೀಡಿರುವ ಮುಖ್ಯಮಂತ್ರಿ, ಕರ್ನಾಟಕ ಸೇರಿದಂತೆ ದೇಶ, ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಅತ್ಯಂತ ಸಂತಸ, ಸಂಭ್ರಮದಿಂದ ರಾಜ್ಯೋತ್ಸವವನ್ನುಆಚರಿಸುವಂತೆ ವಿನಂತಿಸಿದ್ದಾರೆ.
ಕರ್ನಾಟಕದ ನೆಲ, ಜಲ, ಜನರ ಹಿತಾಸಕ್ತಿ ರಕ್ಷಣೆ ಮಾಡುವುದು ನಮ್ಮಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ಕೆಲಸವನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ. ಆಡಳಿತದಲ್ಲಿ ಕನ್ನಡ ಭಾಷೆಯನ್ನು ಪರಿಪೂರ್ಣವಾಗಿ ಜಾರಿಗೆ ತರಲು ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನಗಳು ನಡೆಯಲಿವೆ ಎಂದರು. ಶಾಲಾ-ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕನ್ನಡಕ್ಕೆ ಪ್ರಾತಿನಿಧ್ಯ ನೀಡಲಾಗುವುದು. ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಆಡಳಿತ ಭಾಷೆಯನ್ನಾಗಿ ಕನ್ನಡವನ್ನು ಜಾರಿಗೊಳಿಸುವುದರೊಂದಿಗೆ ಬದುಕಿನ ಭಾಷೆಯಾಗಿ ಮಾಡುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.