ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ | ಇನ್ನು ಕೆಲವೇ ತಿಂಗಳಷ್ಟೆ ಬಾಕಿ
ವಿಜಯನಗರ : ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿ ಇನ್ನೂ ಒಂದು ವಾರ ಆಗಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಕೇಳಿಬರುತ್ತಿವೆ.
ಇನ್ನೇನು ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಭವಿಷ್ಯ ನುಡಿದಿದ್ದಾರೆ.
ಈಗಿರುವ ಸರ್ಕಾರದಲ್ಲಿ ಮೂವರು ಸಿಎಂ ಆಗಿ ಮುಕ್ತಾಯ ಆಗುತ್ತೆ. ಇನ್ನು ಕೆಲವೇ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ.
ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಾವಧಿ ಪೂರ್ಣಗೊಳಿಸಲ್ಲ. ಅವರು 6-7 ತಿಂಗಳು ಮಾತ್ರ ರಾಜ್ಯಭಾರ ಮಾಡ್ತಾರೆ.
2022ರ ಮಾರ್ಚ್ನಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಆಗ್ತಾರೆ ಎಂದು ವೆಂಕಪ್ಪಯ್ಯ ಒಡೆಯರ್ ಭವಿಷ್ಯ ನುಡಿದಿದ್ದಾರೆ.
ಸದ್ಯ ಭವಿಷ್ಯವಾಣಿ ಎಲ್ಲರ ಗಮನ ಸೆಳೆದಿದ್ದು, ಸಾಕಷ್ಟು ಚರ್ಚೆ ಮತ್ತು ಕುತೂಹಲಕ್ಕೂ ಕಾರಣವಾಗಿದೆ.