ಸಿಎಂ ಬದಲಾವಣೆ ವಿಚಾರ ಕೇವಲ ಗಾಳಿ ಸುದ್ದಿ : ಗೋವಿಂದ ಕಾರಜೋಳ
ಚಿತ್ರದುರ್ಗ: ಸಿಎಂ ಬಸವರಾಜ್ ಬೊಮ್ಮಾಯಿ ಅತ್ಯುತ್ತಮ ಆಡಳಿತ ನಡೆಸುತ್ತಿದ್ದು, ಅವರ ಆಡಳಿತಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಬದಲಾವಣೆ ವಿಚಾರ ಕೇವಲ ಗಾಳಿ ಸುದ್ದಿಗೆ ಬೆಲೆ ಕೊಡುವ ಅಗತ್ಯವಿಲ್ಲ ಎಂದರು.
ಬೆಳಗಾವಿ ಗಡಿ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು ಬೆಳಗಾವಿಯಲ್ಲಿ ಆಗಾಗ ಎಂಇಎಸ್ ಪುಂಡಾಟಿಕೆ ಆಗಾಗ ನಡಿತಿರುತ್ತದೆ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಯಾವುದೇ ಬದಲಾವಣೆ ಪ್ರಶ್ನಿಯಿಲ್ಲ. ನಾವೆಲ್ಲರೂ ಒಟ್ಟಾಗಿ, ಒಂದಾಗಿ ಹೋರಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಇನ್ನೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ 5 ವರ್ಷ ಆಡಳಿತದಲ್ಲಿ ಹೇಳಿಕೊಳ್ಳುವ ಸಾಧನೆ ಮಾಡಿಲ್ಲ. ಐದು ವರ್ಷದಲ್ಲಿ ಸಾಧನೆ ಮಾಡದೇ ಈಗ ಹೇಳಿಕೆ ನೀಡುತ್ತಿದ್ದಾರೆ. ಗೃಹ ಸಚಿವವರು ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಈಗಾಗಲೇ ಪಿಎಸ್ಐ ನೇಮಕಾತಿ ವಿಚಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಅಲ್ಲದೇ ಹಗರಣ ಹುಡುಕಿ ತೆಗೆದು 25 ಜನರನ್ನು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ ಸ್ವಲ್ಪ ಕಾಯಬೇಕು, ಯಾರು ಏನು ಮಾಡಿದ್ದಾರೆ ಗೊತ್ತಾಗುತ್ತೆ ಎಂದರು.








