ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಂಡಿಸಿದ ಬಜೆಟ್ ರೈತ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ, ಹಿಂದುಳಿದವರ ವಿರೋಧಿ ಬಜೆಟ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಮುನ್ನೋಟವೇ ಇಲ್ಲದ ಬಜೆಟ್ ಇದು. ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಕೇಂದ್ರದ ಜಿಡಿಪಿ ಶೇ 4.6 ಇದೆ. ನಮ್ಮ ಲೆಕ್ಕದಲ್ಲಿ ಇದು ಶೇ 4 ಇದೆ. ರಾಜ್ಯದಲ್ಲಿ 2019-20ರ ಸಾಲಿನಲ್ಲಿ ಜಿಡಿಪಿಯು ನಿರೀಕ್ಷೆಗಿಂತ ಶೇ 1ರಷ್ಟು ಕಡಿಮೆಯಾಗಿದೆ ಎಂದು ಹೇಳಿದರು. ಕೃಷಿ, ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ನಿರೀಕ್ಷಿತ ಬೆಳವಣಿಗೆ ಕಂಡುಬರುತ್ತಿಲ್ಲ. ಕೃಷಿಗೆ ಬಜೆಟ್‌ನಲ್ಲಿ ಹೇಳಿಕೊಳ್ಳುವಂಥ ಕೊಡುಗೆಗಳೇನೂ ಇಲ್ಲ. ನೀರಾವರಿಗೆ 21 ಸಾವಿರ ಕೋಟಿ ನೀಡಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ಯೋಜನೆಗಳೂ ಸೇರಿದಂತೆ ಮಹದಾಯಿಗೆ 500 ಕೋಟಿ, ಎತ್ತಿನಹೊಳೆಗೆ 1500 ಕೋಟಿ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ಹಸಿರು ಶಾಲು ಹಾಕಿದರೆ ರೈತರು ಉದ್ಧಾರ ಆಗುತ್ತಾರಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ ವ್ಯವಸಾಯ ಮಾಡಿದ್ದಾರೊ ಗೊತ್ತಿಲ್ಲ. ಏಕೆಂದ್ರೆ ಅವರು ಮಂಡ್ಯದಲ್ಲಿ ಲಿಂಬೆಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ಅವರು ಯಾವುದಾದರೂ ಶಾಲು ಹಾಕಿಕೊಳ್ಳಲಿ. ಬಜೆಟ್‌ನಲ್ಲಿ ಸುಳ್ಳು ಹೇಳುವುದೇಕೆ. ನೀರಾವರಿ ಮತ್ತು ಕೃಷಿಗೆ ಯಾವುದೇ ವಿಶೇಷ ಅನುದಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...








