ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ವಿದ್ಯಾರ್ಥಿ ಜೀವನದ ಬಹು ಮುಖ್ಯ ಘಟ್ಟವಾದ ದ್ವಿತೀಯ ಪಿಯು ಅಂತಿಮ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು. ನಿಮ್ಮೆಲ್ಲರ ಅಗಣಿತ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ, ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ” ಎಂದು ಬರೆದಿದ್ದಾರೆ.