ಬೆಂಗಳೂರು : ಸಿಎಂ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಪಕ್ಷದಲ್ಲಿನ ಆಂತರಿಕ ಸಮಸ್ಯೆ ಶಮನ ತಣಿಸುವುದಕ್ಕಾಗಿ ತಮ್ಮ ಪಕ್ಷದ ಶಾಸಕರ ಜಿಲ್ಲಾವಾರು ಸಭೆ ನಡೆಸಿದ್ದಾರೆ.
ಮೊದಲ ದಿನ ತುಮಕೂರು, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರ ಜೊತೆ ಚರ್ಚಿಸಿದ್ದಾರೆ. ಈ ಸಭೆಯಲ್ಲಿ ಸಿಎಂ ಅವರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೂಡ ಭಾಗವಹಿಸಿದ್ದರು. ಈ ವೇಳೆ ಅಗತ್ಯ ಅನುದಾನಕ್ಕಾಗಿ ಪ್ರತಿಯೊಬ್ಬ ಶಾಸಕರು ಮನವಿ ಮಾಡಿದ್ದಾರೆ. ಹೆಚ್ಚಿನ ಅನುದಾನ ಕೇಳಬೇಡಿ. ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ಹಂತ ಹಂತವಾಗಿ ಅನುದಾನ ಕೊಡುತ್ತೇವೆ ಸಿಎಂ ಪ್ರತಿಯೊಬ್ಬ ಶಾಸಕರಿಗೂ ಹೇಳಿದ್ದಾರೆ ಎನ್ನಲಾಗಿದೆ.
ಆದರೆ, ಕಾಂಗ್ರೆಸ್ ಶಾಸಕರ ಜೊತೆ ಸಿಎಂ ಸಭೆ ನಡೆಸಿದ್ದಕ್ಕೆ ಬಿಜೆಪಿ (BJP) ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸಿಎಂ ಅವರು ಪಕ್ಷಾತೀತವಾಗಿ ಶಾಸಕರನ್ನು ಆಹ್ವಾನಿಸಬೇಕು ಎಂದು ಮನವಿ ಮಾಡಿದ್ದಾರೆ.








