`ಕಾಂಗ್ರೆಸ್’ ತೊರೆದ್ರೆ ಸಿ.ಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ..?
ಬೆಂಗಳೂರು : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಸದ್ಯ ಜೆಡಿಎಸ್ ನತ್ತ ಮುಖ ಮಾಡುವ ಎಲ್ಲ ಲಕ್ಷಣಗಳು ಕಾಣುತ್ತಿವೆ.
ವಾರದ ಹಿಂದೆ ಇಬ್ರಾಹಿಂ ಅವರನ್ನು ಭೇಟಿ ಮಾಡಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತೆ ಜೆಡಿಎಸ್ ಪಕ್ಷಕ್ಕೆ ಬರುವಂತೆ ಆಹ್ವಾನಿ ನೀಡಿದ್ರು.
ಇದಕ್ಕೆ ಇಬ್ರಾಹಿಂ ಅವರು ಕೂಡ ಧನಾತ್ಮಕವಾಗಿ ಸ್ಪಂದಿಸಿದ್ರು ಅನ್ನೋ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡಿದ್ವು.
ಇದನ್ನು ಗಮಸಿನಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಬ್ರಾಹಿಂ ನಿವಾಸಕ್ಕೆ ಭೇಟಿ ಕೊಟ್ಟು ಪಕ್ಷ ಬಿಡದಂತೆ ಮನವಿ ಮಾಡಿಕೊಂಡಿದ್ರು.
ಆದ್ರೂ ಕೂಡ ಇಬ್ರಾಹಿಂ ಅವರು ಇತ್ತೀಚೆಗೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದ್ದರು. ಇದನ್ನು ಗಮನಿಸಿದ್ರೆ ಇಬ್ರಾಹಿಂ ಅವರು ಜೆಡಿಎಸ್ ಸೇರೋದು ಪಕ್ಕಾ ಎನ್ನುವಂತಾಗಿದೆ.
ಅಸ್ತಿತ್ವಕ್ಕಾಗಿ ಇಬ್ರಾಹಿಂಗೆ ಜೆಡಿಎಸ್ ಮಣೆ
ಸದ್ಯ ರಾಜ್ಯದಲ್ಲಿ ಜೆಡಿಎಸ್ ಪರಿಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಸ್ತಿತ್ವ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದೆ.
ನೀವು ಇದನ್ನೂ ಓದಿ : ಇಂದಿನಿಂದ ಬೆಂಗಳೂರು ಸೇರಿದಂತೆ ಈ ಪ್ರದೇಶಗಳಲ್ಲಿ ಮಳೆ ಸಾಧ್ಯತೆ
ಹೀಗಾಗಿ ಇಬ್ರಾಹಿಂ ಅವರಿಗೆ ಪಕ್ಷದ ಆಯಕಟ್ಟಿನ ಸ್ಥಾನ ನೀಡಿ ಗೌರವಿಸುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಮತಬ್ಯಾಂಕ್ ಗಿಟ್ಟಿಸಲು ಮುಂದಾಗಿದ್ದಾರೆ ಜೆಡಿಎಸ್ ನಾಯಕರು.
ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಸದ್ಯ ಸಕ್ರಿಯವಾಗಿ ಪಕ್ಷದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಅವರು ಮುಂದಿನ ಚುನಾವಣೆ ವೇಳೆ ಪಕ್ಷ ತೊರೆಯುವ ಸಾಧ್ಯತೆಗಳಿವೆ ಅನ್ನೋ ಮಾತುಗಳು ಕೂಡ ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಬದಲಾವಣೆ ತರಲು ಹೆಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದು, ಹಲವು ಸ್ಥಾನಗಳಿಗೆ ಪ್ರಮುಖ ನಾಯಕರನ್ನು ನೇಮಿಸಲು ತೀರ್ಮಾನಿಸಿದ್ದಾರೆ.
ಅದರಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಇಬ್ರಾಹಿಂ ಅವರನ್ನು ನೇಮಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel