cm ibrahim – ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ಕೇವಲ ಗಿಮಿಕ್
ವಿಜಯಪುರ : ರಾಜ್ಯದಲ್ಲಿ ಎಸ್ ಸಿ – ಎಸ್ ಟಿ ಮೀಸಲಾತಿ ಹೆಚ್ಚಳ ಕೇವಲ ಗಿಮಿಕ್ ಆಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಪರಿಶಿಷ್ಠ ಜಾರಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಎ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಈ ಸಂಬಂಧ ವಿಜಯಪುರದಲ್ಲಿ ಮಾತನಾಡಿದ ಇಬ್ರಾಹಿಂ, ರಾಜ್ಯದಲ್ಲಿ ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ಕೇವಲ ಗಿಮಿಕ್ ಆಗಿದೆ.
ಆರ್ ಎಸ್ ಎಸ್ ನವರಾದ ಬಿ.ಎಸ್.ಯಡಿಯೂರಪ್ಪ ಇದ್ದಾಗಲೇ ಆಗಲಿಲ್ಲ. ಈ ಸರ್ಕಾರಕ್ಕೆ ದಿಕ್ಕಿಲ್ಲ, ದೆಸೆಯಿಲ್ಲ.

ಇವರಿಗೆ ಬದ್ಧತೆ ಇದ್ದರೆ ಒಂದು ಕಮಿಟಿ ರಚನೆ ಮಾಡಲಿ, ಮೀಸಲಾತಿ ಕೇಳುತ್ತಿರುವವರ ಬಗ್ಗೆ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಪಂಚರತ್ನ ಯಾತ್ರೆ ಬಗ್ಗೆ ಮಾತನಾಡಿದ ಇಬ್ರಾಹಿಂ, ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನವೆಂಬರ್ 1 ರಿಂದ ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ.
ಈ ಯಾತ್ರೆ ಮುಂಬೈ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕ ಭಾಗಗಳಲ್ಲಿ ನಡೆಯಲಿದೆ.
ಬಿಜೆಪಿಗೆ ಮೋದಿ ಚಿಂತೆ, ಕಾಂಗ್ರೆಸ್ ಗೆ ರಾಹುಲ್ ಚಿಂತೆ, ಆದರೆ ಜೆಡಿಎಸ್ ಗೆ ಮಾತ್ರ ರಾಜದ ಚಿಂತೆ ಎಂದಿದ್ದಾರೆ.








