ಬೆಂಗಳೂರು: ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ (CM Ibrahim) ಅವರನ್ನು ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ (HD DeveGowda) ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ನಿರ್ಗಮಿತ ರಾಜ್ಯಾಧ್ಯಕ್ಷ ಇಬ್ರಾಹಿಂ ಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ಚಿಂತನ-ಮಂಥನ ಎನ್ನುವ ಹೆಸರಿನ ಪಕ್ಷದ ಸಮಾನಂತರ ಸಭೆ ಕರೆದು, ಜೆಡಿಎಸ್-ಬಿಜೆಪಿ ಹೊಂದಾಣಿಕೆ ಬಗ್ಗೆ ಸಭೆಯಲ್ಲಿ ವಿರೋಧ ವ್ಯಕ್ತಪಡಿಸುತ್ತಾ ಪಕ್ಷದ ರಾಷ್ಟ್ರಧ್ಯಕ್ಷರು ಮತ್ತು ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿ ಹೇಳಿಕೆ ಮತ್ತು ಸುಳ್ಳು ಆರೋಪಗಳನ್ನು ಸಾರ್ವಜನಿಕವಾಗಿ ಮಾಧ್ಯಮಗಳಲ್ಲಿ ಮಾಡಿರುವುದಾಗಿ ವರದಿಯಾಗಿದೆ. ರಾಜ್ಯದಲ್ಲಿನ ಜೆಡಿಎಸ್-ಬಿಜೆಪಿ ಹೊಂದಾಣಿಕೆ ಬಗ್ಗೆ ವಿರೋಧಬಾಸ ಹೇಳಿಕೆ ನೀಡಿ, ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಹೇಳಿದ್ದಾರೆ.