ಅನುಭವ ಮಂಟಪವನ್ನೇ ಮರು ಸೃಷ್ಟಿ ಮಾಡುವಂತೆ ಸಿಎಂ ಸೂಚನೆ Saaksha Tv
ಬೆಂಗಳೂರು: ಬಸವಕಲ್ಯಾಣದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪದಲ್ಲಿ ಬಸವಣ್ಣವರ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿ ಮಾಡುವಂತೆ ಅಧಿಕಾರಿಗೆ ಸೂಚನೆ ನೀಡಿದ ಮುಂಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಗೃಹ ಕಚೇರಿ ಕೃಷ್ಣಾದಲ್ಲಿ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪದ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಾತ್ಯಕ್ಷತೆಯನ್ನು ವಿಕ್ಷಿಸಿದರು. ನಂತರ ಮಾತನಾಡಿದ ಸಿಎಂ, ಬಸವಣ್ಣನವರ ಕಾಲದಲ್ಲಿ ಅನುಭವ ಮಂಟಪದಲ್ಲಿ ಸದಾ ವಿಚಾರ ಮಂಥನ ನಡೆಯುತ್ತಿತ್ತು. ಪ್ರಸ್ತುತ ನಿರ್ಮಿಸುತ್ತಿರುವ ಅನುಭವ ಮಂಟಪದಲ್ಲಿಯೂ ನಿರಂತರ ಚಟುವಟಿಕೆಗಳನ್ನು ನಡೆಸಲು ಪೂರಕವಾಗಿ ಸುಸಜ್ಜಿತ ಸಭಾಂಗಣಗಳು ಮತ್ತು ಇತರ ಮೂಲಸೌಕರ್ಯಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

12ನೇ ಶತಮಾನದಲ್ಲಿನ ಬಸವಣ್ಣನವರ ಅನುಭವ ಮಂಟಪದ ಅರಿವು ಮಕ್ಕಳಲ್ಲಿ ಅರಿವು ಮೂಡಿಸುವ ರೀತಿಯಲ್ಲಿ ಇದನ್ನು ನಿರ್ಮಿಸಬೇಕು. ಜೊತೆಗೆ ಸುಸಜ್ಜಿತವಾದ ಡಿಜಿಟಲ್ ಲೈಬ್ರರಿ, ಹಾಲೋಗ್ರಾಫಿಕ್ ಪ್ರದರ್ಶನ ಮೊದಲಾದ ವ್ಯವಸ್ಥೆಗಳನ್ನು ರೂಪಿಸಲಾಗುವುದು. ಕನಿಷ್ಠ 200 ಜನರು ಕೂತುಕೊಳ್ಳುವ ಸಭಾಂಗಣ ನಿರ್ಮಾಣ ಮಾಡಿ ಎಂದು ಸೂಚನೆ ನೀಡಿದರು.
ಕಟ್ಟಡದ ಗುಣಮಟ್ಟ ಉತ್ಕೃಷ್ಟವಾಗಿ ಇರಲಿದಿನದ 24 ಗಂಟೆ ಕಾಲ ವಿದ್ಯುತ್ ಪೂರೈಕೆ ಇರುವಂತೆ ನೋಡಿಕೊಳ್ಳಿ. ಅನುಭವ ಮಂಟಪದ ಸುರಕ್ಷತೆ ಮತ್ತು ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಾತನಾಡಿದರು.