ಬೆಂಗಳೂರು: ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು 2020-21ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ನಲ್ಲಿ ಸಿಎಂ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಬಳಕೆ ಮಾಡಿಕೊಂಡು ಅದೇ ಮಾದರಿಯಲ್ಲಿ ಹೋಗ್ತಿದ್ದೀವಿ ಅನ್ನೋದನ್ನ ಹೇಳಿದ್ದಾರೆ ಅಷ್ಟೇ. ಆರೋಗ್ಯ ಕ್ಷೇತ್ರಕ್ಕೆ ಕೊಟ್ಟಿರುವ ಹಣ ನೋಡಿದ್ರೆ ಅದು ಸುಣ್ಣ-ಬಣ್ಣ ಬಳಿಯೋಕೂ ಸಾಲಲ್ಲ. ಆ ರೀತಿ ಇದೆ ಕಾರ್ಯಕ್ರಮಗಳು. ಬಜೆಟ್ನಲ್ಲಿ ಯಾವುದೇ ಕ್ಲ್ಯಾರಿಟಿಯಿಲ್ಲ. ಕೆಲವು ನನ್ನ ಕಾರ್ಯಕ್ರಮಗಳು ಮುಂದುವರೆದಿದೆ. ಕೇಂದ್ರ ಸರ್ಕಾರದಿಂದ ಹಣ ಬರುತ್ತೋ ಇಲ್ವೋ ಅನ್ನೋ ಅನುಮಾನದಿಂದಲೇ ಜನರಿಗೆ ಒಂದು ಸ್ಪಷ್ಟ ಸಂದೇಶ ಕೊಡೋದಕ್ಕೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಪಂಚಮಸಾಲಿ ಪ್ರತಿಭಟನೆ ಗಾಯದ ಮೇಲೆ ‘ಉಪ್ಪು’ ಸವರಿದ CM & ಕಿಚ್ಚು ಹೊತ್ತಿಸಿದ ‘ಪರಂ’..!
ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಪಂಚಮಸಾಲಿ ಲಿಂಗಾಯತ ಸಮುದಾಯದ ಮೇಲಿನ ಲಾಠಿಚಾರ್ಜ್ ಸಂಬಂಧ ಸಮುದಾಯದ ಹೋರಾಟದ ಕಿಚ್ಚು ಜ್ವಾಲಾಮುಖಿಯಾಗಿ ಸರ್ಕಾರದ ಅಡಿಪಾಯಕ್ಕೆ ಬಿಸಿಮುಟ್ಟಿಸತೊಡಗಿದೆ ಈ ಬಗ್ಗೆ ಇನ್...