ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೋಂಕು ಹರಡದಂತೆ ತಡೆಯಲು ರಾಜ್ಯ ಸರ್ಕಾರ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದರ ಭಾಗವಾಗಿ ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಭೀತಿಯನ್ನ ತಡೆಗಟ್ಟಲು, ಖಾಸಗಿ ಆಸ್ಪತ್ರೆಗಳನ್ನೂ ಚಿಕಿತ್ಸೆಗೆ ಬಳಸಿಕೊಳ್ಳುವ ಬಗ್ಗೆ ನಿರ್ಧಾರಿಸಲಾಗಿದೆ. ಈ ಬಗ್ಗೆ ಈಗಾಗಲೇ ಖಾಸಗಿ ಆಸ್ಪತ್ರೆಗಳಿಗೆ ಸೂಚನೆಯನ್ನೂ ನೀಡಲಾಗಿದೆ.
ಈ ಸಭೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೃಷ್ಟಿಯಾಗುವ ವೆಂಟಿಲೇಟರ್ ಅಭಾವಕ್ಕೆ ಖಾಸಗಿ ಆಸ್ಪತ್ರೆಗಳ ನೆರವು ಪಡೆಯುವುದು ಮತ್ತು ಹಾಸಿಗೆ ಕೊರತೆ ಆಗದಂತೆ ಕೈಗೊಳ್ಳುವ ಬಗ್ಗೆ ಚರ್ಚಿಸಲಿದ್ದಾರೆ.









