ಬೆಂಗಳೂರು : ಕರ್ನಾಟಕ ಚಲನಚಿತ್ರೋದ್ಯಮ ನಿಯೋಗ ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದೆ.
ನಟ ಶಿವರಾಜ್ ಕುಮಾರ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬಿಎಸ್ ವೈ ಅವರನ್ನು ನಿಯೋಗ ಭೇಟಿ ಮಾಡಿದ್ದು, ಚಿತ್ರರಂಗದ ಸದ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಹಲವು ಮನವಿಗಳನ್ನು ಮಾಡುತ್ತಿದೆ.
ಅಲ್ಲದೆ ನಿಯೋಗ ಕೊರೊನಾದಿಂದ ತೀವ್ರ ಕಷ್ಟದಲ್ಲಿ ಇರುವ ಸಿನಿ ಕಾರ್ಮಿಕರು ಹಾಗೂ ಕಲಾವಿದರಿಗೆ ವಿಷೇಶ ಆರ್ಥಿಕ ಪ್ಯಾಕೇಜ್, ಚಿತ್ರಮಂದಿರಗಳ ಕಾರ್ಪೊರೇಷನ್ ಟ್ಯಾಕ್ಸ್, ಜಿಎಸ್ ಟಿ ಸೇರಿದಂತೆ ಹಲವು ಮನವಿಗಳನ್ನ ಸಿಎಂ ಮುಂದೆ ಇಡಲಿದೆ.
ಸಿಎಂ ಭೇಟಿಗೂ ಮುನ್ನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗುಬ್ಬಿ ಜೈರಾಜ್ ಮಾತನಾಡಿ, ಚಿತ್ರಮಂದಿಗಳನ್ನು ತೆರೆಯಲು ಅನುಮತಿ ನೀಡಲು ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಮನವಿ ಮಾಡುವುದರ ಜೊತೆಗೆ ಕೊರೊನಾದಿಂದ ನಲುಗಿ ಹೋಗಿರುವ ಕನ್ನಡ ಚಿತ್ರೋದ್ಯಮಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.