ಕೋಲಾರ : ರೋಷನ್ ಬೇಗ್, ಎಂಟಿಬಿ ನಾಗರಾಜ್, ಶಂಕರ್ ಹಾಗೂ ವಿಶ್ವನಾಥ್ ಟಿಕೆಟ್ ಕೊಡಬೇಕೆಂದು ಕೇಳಿದ್ದೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್ ರೋಷನ್ ಬೇಗ್, ಎಂಟಿಬಿ ನಾಗರಾಜ್, ಶಂಕರ್ ಹಾಗೂ ವಿಶ್ವನಾಥ್ ಟಿಕೆಟ್ ಕೊಡಬೇಕೆಂದು ಕೇಳಿದ್ದೇವೆ. ನಾಲ್ವರಿಗೂ ಟಿಕೆಟ್ ಕೊಡಲು ಸಿಎಂ ಬಳಿ ಮನವಿ ಮಾಡಿದ್ದೇವೆ. ಇದರ ಬಗ್ಗೆ ಬಿಜೆಪಿ ರಾಜ್ಯ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಯಡಿಯೂರಪ್ಪ ನವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಈಗಾಗಲೇ ಚಾಚು ತಪ್ಪದೆ ಬೇಡಿಕೆಗಳನ್ನು ಈಡೇರಿಸಿದ್ದಾರೆ.
ಇದೆ ವೇಳೆ ರಾಜ್ಯಸಭೆ ಗೆ ಅಭ್ಯರ್ಥಿಗಳು ಆಯ್ಕೆ ಆಗಿರುವ ವಿಚಾರದ ಬಗ್ಗೆ ಮಾತನಾಡಿದ ಅವರು ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ದೆಹಲಿ ಹಾಗೂ ರಾಜ್ಯ ಕೋರ್ ಕಮಿಟಿ ಸೇರಿ ತೀರ್ಮಾನ ಮಾಡಿದೆ. ರಾಜ್ಯಸಭಾ ಚುನಾವಣೆ ಸ್ಪರ್ಧಿಗಳನ್ನು ದೆಹಲಿ ನಾಯಕರು ಆಯ್ಕೆ ಮಾಡಿದ್ದಾರೆ. ಹೈಕಮಾಂಡ್ ಆದೇಶವನ್ನು ಪ್ರತಿವೊಬ್ಬ ಬಿಜೆಪಿ ಯವ್ರು ಪಾಲನೆ ಮಾಡುತ್ತಾರೆ ಎಂದು ಹೇಳಿದ್ದಾರೆ.








