ಸಿಎಂ ಸುದ್ದಿಗೋಷ್ಠಿ : ವಿಶೇಷ ಪ್ಯಾಕೇಜ್ ನಲ್ಲಿ ಯಾರಿಗೆ ನೆರವು..?
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಲಾಕ್ ಡೌನ್ ವಿಸ್ತರಣೆ ಹಾಗೂ ವಿಶೇಷ ಪ್ಯಾಕೇಜ್ ಘೋಷಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಸದ್ಯ ಸಿಎಂ ನೇತೃತ್ವದಲ್ಲಿ ಹಿರಿಯ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ತೀರ್ಮಾನ ಕೈಗೊಂಡು ಸಿಎಂ ಪ್ಯಾಕೇಜ್ ಘೋಷಣೆ ಮಾಡಬಹುದು ಎಂದು ಹೇಳಲಾಗಿದೆ.
ಈ ಮಧ್ಯೆ ವಿಶೇಷ ಪ್ಯಾಕೇಜ್ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದು, ಸಹಕಾರ ಸಂಘಗಳ ಮೂಲಕ ರೈತರು, ಸ್ತ್ರೀಶಕ್ತಿ ಸಂಘದ ಮಹಿಳೆಯರು ಪಡೆದುಕೊಂಡ ಸಾಲದ ಕಂತು ಮುಂದೂಡಬೇಕು.
ಬಡ್ಡಿ ಅಥವಾ ಸಾಲಮನ್ನಾ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಕುರಿತಾಗಿ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆದ್ರೆ ಸದ್ಯ ರಾಜ್ಯ ಆರ್ಥಿಕ ಸಂಕಷ್ಟವನ್ನ ಎದುರಿಸುತ್ತಿದ್ದು, ಈ ಪರಿಸ್ಥಿತಿಯಲ್ಲಿ ಸಾಲಮನ್ನಾ ಮಾಡಲು ಸಾಧ್ಯವಾಗಿರಬಹುದು.
ಹೀಗಾಗಿ ಒಂದಿಷ್ಟು ವಿನಾಯಿತಿ ಹಾಗೂ ಸಾಲದ ಕಂತು ಪಾವತಿಸಲು ಅವಧಿ ವಿಸ್ತರಿಸಬಹುದಾಗಿದೆ. ಬಡ್ಡಿ ರಿಯಾಯಿತಿ ಎಂದು ಹೇಳಲಾಗಿದೆ.
ಇನ್ನುಳಿದಂತೆ ವಿದ್ಯುತ್ ಬಿಲ್, ನೀರಿನ ಬಿಲ್ ನಲ್ಲಿ ಹೋಟೆಲ್ ಗಳಿಗೆ ವಿನಾಯಿತಿ, ಆಟೋ, ಟ್ಯಾಕ್ಸಿ ಚಾಲಕರಿಗೆ ಆರ್ಥಿಕ ನೆರವು, ರೈತರು, ತರಕಾರಿ ಬೆಳೆಗಾರರಿಗೆ ಆರ್ಥಿಕ ನೆರವು ಸಿಗಬಹುದು ಎಂದು ಹೇಳಲಾಗಿದೆ.









