ಬೆಂಗಳೂರು: ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರ ಸಿಎಂಗೆ ದೊಡ್ಡ ತಲೆನೋವು ತಂದಿದೆ. ಇಂದು ಕೂಡ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಅರ್ಜಿಯ ವಿಚಾರಣೆ ಕೋರ್ಟ್ ನಲ್ಲಿ ನಡೆಯಲಿದ್ದು, ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರಿಸರ್ವ್ ಮಾಡಿದ್ದಾರೆ.
ಮುಡಾ (MUDA) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು (Governer) ಪ್ರಾಸಿಕ್ಯೂಷನ್ (Prosection) ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ನಲ್ಲಿ (High Court) ವಿಚಾರಣೆ ನಡೆಯುತ್ತಿದೆ. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು (ಸೆ.2) ಮಧ್ಯಾಹ್ನ 2:30ಕ್ಕೆ ನಡೆಯಲಿದೆ.
ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಎರಡು ದಿನಗಳ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಶನಿವಾರ ಪ್ರತಿವಾದಿಗಳ ವಾದಕ್ಕೆ ಉತ್ತರ ನೀಡಲು ಸಿದ್ದರಾಮಯ್ಯಗೆ ಹೈಕೋರ್ಟ್ನಲ್ಲಿ ಶನಿವಾರ ಎರಡು ದಿನಗಳ ಕಾಲ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು.
ಶನಿವಾರ ನಡೆದ ವಿಚಾರಣೆಯಲ್ಲಿ ಪ್ರತಿವಾದಿಗಳ ವಾದಕ್ಕೆ ಉತ್ತರ ನೀಡಲು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸಮಯಾವಕಾಶ ಕೋರಿದ್ದರು. ಹೀಗಾಗಿ ಕೋರ್ಟ್ ಸೆ.2ಕ್ಕೆ ವಿಚಾರಣೆ ಮುಂದೂಡಿತ್ತು. ಹೀಗಾಗಿ ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ವಕೀಲರೊಂದಿಗೆ ಚರ್ಚೆ ನಡೆಸುವ ಹಿನ್ನೆಲೆಯಲ್ಲಿ ಸಿಎಂ ಸಂಜೆ 5ರ ವರೆಗಿನ ಎಲ್ಲ ಕಾರ್ಯಕ್ರಮಗಳನ್ನು ಕಾಯ್ದಿರಿಸಿದ್ದಾರೆ.








