ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ಜಗಳಗಳು ಜೋರಾಗಿದ್ದು, ಸಿಎಂ ಸಿದ್ದರಾಮಯ್ಯನವರು ಯಾವಾಗ ಬೇಕಾದ್ರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಒಳಜಗಳವೇ ಸಿಎಂ ರಾಜೀನಾಮೆಗೆ ಕಾರಣವಾಗಬಹುದು, ಕಾಂಗ್ರೆಸ್ ಪಕ್ಷದಲ್ಲಿ ಎಂದಿಗೂ ಮುಗಿಯದ ಒಳಜಗಳಗಳಿವೆ. ಸಿದ್ದರಾಮಯ್ಯನವರದ್ದು ಒಂದು ಬಣ ಡಿಕೆ ಶಿವಕುಮಾರ್ ಅವರದ್ದೊಂದು ಮತ್ತೊಂದು ಬಣ ಅಂತ ಬಹಳ ಮೊದಲೇ ಹೇಳಿದ್ದೆ, ಈಗ ಅದು ಬಯಲಿಗೆ ಬರುತ್ತಿದೆ ನೋಡಿ ಎಂದಿದ್ದಾರೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ: ಸಿದ್ದರಾಮಯ್ಯ ಅವರು ತಮ್ಮ ಅವಧಿ ಪೂರ್ಣಗೊಳಿಸಲು ಸಾಧ್ಯವಿಲ್ಲ ಮತ್ತು ಅವರು ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಒಳಜಗಳ: ಕಾಂಗ್ರೆಸ್ ಪಕ್ಷದ ಒಳಜಗಳ ಮತ್ತು ಡಿ.ಕೆ. ಶಿವಕುಮಾರ್ ಅವರ ಸಿಎಂ ಸ್ಥಾನಕ್ಕಾಗಿ ಹೋರಾಟ ಕೂಡ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಕಾರಣವಾಗಬಹುದು.








