ಬೆಂಗಳೂರು: ಕಿತ್ತೂರು ಉತ್ಸವ 2024ರ ಜ್ಯೋತಿಗೆ (Kittur Victory Torch) ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಮುಂದೆ ಅವರು ಚಾಲನೆ ನೀಡಿದರು. ಈ ವೇಳೆ ಅಕ್ಟೋಬರ್ 23, 24, 25 ರಂದು ಕಿತ್ತೂರಿನಲ್ಲಿ ಉತ್ಸವ (Kittur Utsav 2024) ನಡೆಯಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಸಂಗೊಳ್ಳಿ ರಾಯಣ್ಣ ಕೂಡ, ಕಿತ್ತೂರು ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಅವರು ಎಂದಿದ್ದಾರೆ.
ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರ ಸಕಲ ನೆರವು ನೀಡಲಾಗುವುದು ಎಂದಿದ್ದಾರೆ.