ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಜಯನಗರದ ಅಪೋಲೋ ಆಸ್ಪತ್ರೆಗೆ ತೆರಳಿದ ಅವರು, ಆರೋಗ್ಯ ವಿಚಾರಿಸಿದರು. ಈ ವೇಳೆ ಸಚಿವ ಚೆಲುವರಾಯಸ್ವಾಮಿ ಕೂಡ ಇದ್ದರು. ಕುಮಾರಸ್ವಾಮಿ ಅವರು ಸುಸ್ತಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ನಿನ್ನೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ವಾರ್ಡ್ ಗೆ ಶಿಪ್ಟ್ ಮಾಡಲಾಗಿದೆ. ಆರೋಗ್ಯದಲ್ಲಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಸದ್ಯ ಅವರ ಆರೋಗ್ಯ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ನಾಳೆ ಅಥವಾ ನಾಡಿದ್ದು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಡಿಸ್ಚಾರ್ಜ್ ಮಾಡಿದರೂ ರೆಸ್ಟ್ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.








