ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಅಶೋಕ್ ಹೇಳಿಕೆಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಆರ್. ಅಶೋಕ್ ಗೆ ತಿರುಗೇಟು

Author2 by Author2
October 8, 2024
in Politics, State, ರಾಜಕೀಯ, ರಾಜ್ಯ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಬೆಂಗಳೂರು: ಜಾತಿಗಣತಿ ವರದಿ ಕುರಿತು ಸಿಎಂ ಸಿದ್ದರಾಮಯ್ಯ ಮತ್ತೊಮ್ ಸ್ಪಷ್ಟನೆ ನೀಡಿದ್ದಾರೆ. ಜಾತಿಗಣತಿ ಕುರಿತು ವಿಪಕ್ಷ ನಾಯಕ ಅಶೋಕ್ ಹೇಳಿಕೆಗೆ ತಮ್ಮ ಎಕ್ಸ್ ಖಾತೆ ಮೂಲಕ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಜನಗಣತಿ ಬಗ್ಗೆ ಬಿಜೆಪಿಗೆ (BJP) ಯಾವ ತಕರಾರು-ವಿರೋಧ ಇಲ್ಲ. ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬ ವಿರೋಧಪಕ್ಷದ ನಾಯಕರಾದ ಅಶೋಕ್ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು. ಅಶೋಕ್ ಅವರೇ, ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ. ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದು ಗುಡುಗಿದ್ದಾರೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 19, 2026
Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

March 19, 2026

ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ ಕನಸಿನ ʻಅಂತ್ಯೋದಯʼ ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನೀವು ಮಾತ್ರ ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೆ. 2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಅಂಕಿ ಅಂಶಗಳ ಪರಿಶೀಲನಾ ಕಾರ್ಯ ಪೂರ್ಣಗೊಳ್ಳದೆ ಇದ್ದ ಕಾರಣ ಆ ಅವಧಿಯಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಬೇರೆ ಯಾವ ಕಾರಣಗಳು ಇರಲಿಲ್ಲ ಎಂದು ಹೇಳಿದ್ದಾರೆ.

ವರದಿ ಬಿಡುಗಡೆಗೆ ಸಿದ್ಧವಾಗಿದೆ. ಅದನ್ನು ಅಂಗೀಕರಿಸಲು ನಮ್ಮ ಪಕ್ಷ ಮತ್ತು ಸರ್ಕಾರ ಕೂಡಾ ಬದ್ಧವಾಗಿದೆ. ಅಶೋಕ್ (R Ashok) ಅವರೇ, ನಮ್ಮ ಪಕ್ಷದ ಎಲ್ಲ ನಾಯಕರು ತಾತ್ವಿಕವಾಗಿ ಜಾತಿಗಣತಿಯನ್ನು ಒಪ್ಪಿಕೊಂಡಿದ್ದಾರೆ. ಯಾರ ವಿರೋಧವೂ ಇಲ್ಲ. ವಿರೋಧ ಪಕ್ಷಗಳ ಸುಳ್ಳು ಪ್ರಚಾರದಿಂದಾಗಿ ಕೆಲವರಲ್ಲಿ ನಿರಾಧಾರವಾದ ಸಂಶಯಗಳು ಹುಟ್ಟಿಕೊಂಡಿವೆ. ಇನ್ನು ಕೆಲವರಲ್ಲಿ ತಪ್ಪು ಅಭಿಪ್ರಾಯಗಳಿಂದಾಗಿ ಗೊಂದಲಗಳಿವೆ. ಮಠಾಧೀಶರು ಸೇರಿದಂತೆ ಎಲ್ಲರ ಅನುಮಾನ, ಸಂಶಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಜಾತಿಗಣತಿ ವರದಿಯನ್ನು ಜಾರಿಗೆ ತರುವ ನಿರ್ಧಾರವನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಜಾತಿಗಣತಿಯನ್ನು ರಾಜಕೀಯ ದಾಳವಾಗಿ ಬಳಸುವುದು ದಲಿತರು ಮತ್ತು ಹಿಂದುಳಿದವರಿಗೆ ಮಾಡುವ ಅವಮಾನವಲ್ಲವೇ ಎಂದು ಅಶೋಕ್ ಅವರು ಅಮಾಯಕರಂತೆ ಪ್ರಶ್ನಿಸಿದ್ದಾರೆ. ಸನ್ಮಾನ್ಯ ಅಶೋಕ್ ಅವರೇ, ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ. ಕೇವಲ ಜಾತಿ ಜನಗಣತಿ ಅಲ್ಲ. ಇದು ಸರ್ವರ ಒಳಿತಿಗಾಗಿ ನಡೆಸಲಾದ ರಾಜ್ಯದ ಏಳು ಕೋಟಿ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ. ಇದನ್ನು ಇಲ್ಲಿಯವರೆಗೆ ದಲಿತರಾಗಲಿ, ಹಿಂದುಳಿದ ಜಾತಿಯವರಾಗಲಿ ವಿರೋಧಿಸಿಲ್ಲ. ಹೀಗಿರುವಾಗ ಅವರಿಗೆ ಅವಮಾನವಾಗಿದೆ ಎಂದು ಹೇಗೆ ಹೇಳುತ್ತೀರಿ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಜಾತಿ ಜನಗಣತಿ ವಿರುದ್ಧ ತಳ ಸಮುದಾಯಗಳನ್ನು ಎತ್ತಿಕಟ್ಟುವ ಉದ್ದೇಶ ನಿಮ್ಮದಾಗಿದ್ದರೆ ನಿಮಗೆ ನಿರಾಶೆ ಖಚಿತ. ಜಾತಿಗಣತಿ ನನ್ನ ಕನಸಿನ ಕೂಸು ಎಂದು ಹೇಳಲು ಯಾವ ಹಿಂಜರಿಕೆಯೂ ಇಲ್ಲ. 1992ರಲ್ಲಿ ಸುಪ್ರೀಂ ಕೋರ್ಟ್ (Supreme Court) ಮಂಡಲ ವರದಿಗೆ ಸಂಬಂಧಿಸಿದಂತೆ ನೀಡಿದ್ದ ಆದೇಶದಲ್ಲಿ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗವನ್ನು ರಚಿಸಿ, ಕಾಲಕಾಲಕ್ಕೆ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿತ್ತು. ಇದರಂತೆ 1995ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಜಾತಿಗಳ ಆಯೋಗವನ್ನು ರಚಿಸಿದ್ದೆ. 2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಆದೇಶ ನೀಡಿದ್ದೆ. ಇದು ದೇಶದಲ್ಲಿಯೇ ಪ್ರಥಮ ಪ್ರಯತ್ನ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ.

ಅರ್ಥಮಾಡಿಕೊಂಡಿದ್ದಾರೆ. ನೀವು ಯಾವ ವೇಷ ಧರಿಸಿ ಬಣ್ಣ ಬಳಿದುಕೊಂಡು ಮಾತನಾಡಿದರೂ ನಿಮ್ಮ ಆಂತರ್ಯದ ಅಭಿಪ್ರಾಯ ಏನೆಂಬುದು ಜನರಿಗೆ ತಿಳಿದಿದೆ ಎಂದು ಗುಡುಗಿದ್ದಾರೆ.

Tags: CM Siddaramaiah responded to Ashok's statement
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 19, 2026
0

ದಿನ ಭವಿಷ್ಯ: 19-03-2026 ಮೇಷ ರಾಶಿ ಇಂದು ನಿಮಗೆ ಆರ್ಥಿಕವಾಗಿ ಲಾಭದಾಯಕ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ಸೂಚನೆಗಳಿವೆ. ಕೌಟುಂಬಿಕ ಜೀವನದಲ್ಲಿ ಶಾಂತಿ ನೆಲೆಸಲಿದ್ದು...

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

by Shwetha
March 19, 2026
0

ಮೇಷ ರಾಶಿ ಈ ವರ್ಷ ಮೇಷ ರಾಶಿಯವರಿಗೆ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಶನಿಯು ನಿಮ್ಮ ರಾಶಿಯಿಂದ ದ್ವಾದಶ ಭಾವದಲ್ಲಿ ಸಂಚರಿಸುವುದರಿಂದ ಖರ್ಚು ವೆಚ್ಚಗಳು ಹೆಚ್ಚಾಗಬಹುದು. ದೂರದ ಪ್ರಯಾಣ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram