ಬೆಂಗಳೂರು: ರಾಜ್ಯದಲ್ಲಿ ಕೊನೆಯ ಹಂತದ ಮತದಾನ ಆರಂಭವಾಗಿದೆ. ನಾಯಕರು ಮತದಾರರನ್ನು ಸೆಳೆಯುವುದಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಚುನಾವಣೆ ಪ್ರಚಾರದಿಂದ ಬಳಲಿ ಬೆಂಡಾಗಿರುವ ಸಿಎಂ ಸಿದ್ದರಾಮಯ್ಯ ಅವರು ಈಗ ರಿಲ್ಯಾಕ್ಸ್ ಮೂಡ್ ಗೆ ಜಾರಿಗೆದ್ದಾರೆ. ಈಗ ಅವರು ಊಟಿಗೆ ಪ್ರಯಾಣ ಬೆಳೆಸಿದ್ದಾರೆ.
ಹೆಚ್‍ಎಎಲ್‍ನಿಂದ (HAL) ಮೈಸೂರಿಗೆ ಪ್ರಯಾಣ ಬೆಳೆಸಿ ಅಲ್ಲಿಂದ ಊಟಿಗೆ (Ooty) ತೆರಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ. ಇದಕ್ಕೂ ಮುನ್ನ ಸಿಎಂ ಅವರನ್ನು ಸಚಿವರಾದ ರಾಮಲಿಂಗಾರೆಡ್ಡಿ, ಮಹದೇವಪ್ಪ, ರಾಜಣ್ಣ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎರಡನೇ ಹಂತದ ಮತದಾನದ ಬಗ್ಗೆ ಚರ್ಚಿಸಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋಗಿದ್ದಾರೆ.
ಇನ್ನೊಂದೆಡೆ ಡಿಕೆಶಿ ತಮ್ಮ ಕುಟುಂಬದೊಂದಿಗೆ ಚಿಕ್ಕಮಗಳೂರು ರೆಸಾರ್ಟ್ ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.