ಸಂಜೆ ಐದಕ್ಕೆ ಸಿಎಂ ಮಹತ್ವದ ಪ್ರೆಸ್ ಮೀಟ್ : ಲಾಕ್ ಡೌನ್ ಭವಿಷ್ಯ ನಿರ್ಧಾರ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಭವಿಷ್ಯ ಇಂದೇ ನಿರ್ಧಾರವಾಗುವ ಸಾಧ್ಯತೆಗಳಿವೆ.
ಸದ್ಯ ರಾಜ್ಯದಲ್ಲಿ ಜೂನ್ 7ರ ವರೆಗೂ ಲಾಕ್ ಡೌನ್ ಜಾರಿಯಲ್ಲಿದೆ.
ಆದ್ರೆ ಇದಾದ ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡಬೇಕೋ ಬೇಡವೋ ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ.
ಈ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನ ಕರೆದಿದ್ದು ಇಲ್ಲಿ ಲಾಕ್ ಡೌನ್ ಭವಿಷ್ಯ ನಿರ್ಧಾರವಾಗಬಹುದು ಎಂದು ಅಂದಾಜಿಸಲಾಗಿದೆ.
ಲಾಕ್‍ಡೌನ್ ಆದೇಶದಿಂದಾಗಿ ರಾಜಧಾನಿಯಲ್ಲಿ ಸೋಂಕಿನ ಸಂಖ್ಯೆ ತಹಬದಿಗೆ ಬರುತ್ತಿದೆ. ಇಂತಹ ಸಂದರ್ಭದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿಬಿಟ್ಟರೆ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಹೀಗಾಗಿ ಬೆಂಗಳೂರಿನಲ್ಲಿ ಜೂನ್ 7ರ ಬಳಿಕವೂ ಲಾಕ್ ಡೌನ್ ಮಾದರಿಯ ನಿಬರ್ಂಧಗಳು ಮುಂದುವರಿಯಲಿ ಅಂತಾ ಬಿಬಿಎಂಪಿ ರಾಜ್ಯ ಸರ್ಕಾರಕ್ಕೆ ಹೇಳಿದೆ ಎನ್ನಲಾಗಿದೆ.
ಇತ್ತ ಸಚಿವರು ಕೂಡ ಇನ್ನೊಂದು ವಾರ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.