ಬೆಂಗಳೂರು : ಹೆಮ್ಮಾರಿ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಶೀಘ್ರ ಕೊರೊನಾ ಸೋಂಕಿನ ಬಾಧೆಯಿಂದ ಮುಕ್ತರಾಗಿ ರಾಜ್ಯದ ಜನತೆಯ ಆರೋಗ್ಯ ರಕ್ಷಣೆಯೂ ಸೇರಿದಂತೆ ಆಡಳಿತಾತ್ಮಕ ಕಾರ್ಯದಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ..
ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಶೀಘ್ರ ಕೊರೊನಾ ಸೋಂಕಿನ ಬಾಧೆಯಿಂದ ಮುಕ್ತರಾಗಿ ರಾಜ್ಯದ ಜನತೆಯ ಆರೋಗ್ಯ ರಕ್ಷಣೆಯೂ ಸೇರಿದಂತೆ ಆಡಳಿತಾತ್ಮಕ ಕಾರ್ಯದಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.@BSYBJP
— Siddaramaiah (@siddaramaiah) August 3, 2020
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ತಿಳಿದು ಬೇಸರವಾಗಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.