ಉತ್ತರಾಖಂಡ್ ಬಿಜೆಪಿ ರಾಜಕೀಯ ಬಿಕ್ಕಟ್ಟು : ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ

1 min read
Trivendra Singh Rawat

ಉತ್ತರಾಖಂಡ್ ಬಿಜೆಪಿ ರಾಜಕೀಯ ಬಿಕ್ಕಟ್ಟು : ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ

ಡೆಹ್ರಾಡೂನ್ (ಉತ್ತರಾಖಂಡ್) : ಉತ್ತರಖಂಡ ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು, ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ಸಂಜೆ ರಾಜಭವನಕ್ಕೆ ತೆರಳಿದ ಅವರು ಗವರ್ನರ್ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

2017ರಲ್ಲಿ ಬಹುಮತದೊಂದಿಗೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತ್ತು. ಸುಮಾರು ನಾಲ್ಕು ವರ್ಷಗಳ ಕಾಲ ತ್ರಿವೇಂದ್ರ ಸಿಂಗ್ ರಾವತ್ ಸಿಎಂ ಆಗಿ ಸೇವೆ ಸಲ್ಲಿಸಿದ್ದಾರೆ.

Trivendra Singh Rawat

ಆದರೆ ಕಳೆದ ಕೆಲವು ತಿಂಗಳಿಂದ ಸಿಎಂ ಕಾರ್ಯಶೈಲಿ ಬಗ್ಗೆ ಅನೇಕ ಸಚಿವರು, ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು.

ಇದೇ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಕಳೆದ ಸೋಮವಾರ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ದೆಹಲಿಗೂ ಕರೆಯಿಸಿಕೊಂಡಿತ್ತು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜತೆ ಮಾತುಕತೆ ನಡೆದಿತ್ತು.

ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿರುವಾಗಲೇ ಈ ಬೆಳವಣಿಗೆ ನಡೆದಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd