ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್. ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ ಅವರು, ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಿಸಲಿಲ್ಲ ಅಂದರೆ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ. ಬಡವರ ಪರ ಕೆಲಸ ಮಾಡುವ ಅವರನ್ನು ನಾವು ಅಧಿಕಾರದಲ್ಲಿ ಉಳಿಸಬೇಕಾದರೆ ಕಾಂಗ್ರೆಸ್ ಗೆಲ್ಲಿಸಲೇಬೇಕು ಎಂದು ಹೇಳಿದ್ದಾರೆ.