1,250 ಕೋಟಿ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ CM Yeddyurappa
ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ 1,250 ಕೋಟಿ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸುತ್ತಿದ್ದು, ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.
ಬರೋಬ್ಬರಿ 1,250 ಕೋಟಿ ಪ್ಯಾಕೇಜ್ ಅನ್ನು ಸಿಎಂ ಘೋಷಣೆ ಮಾಡಿದ್ದು, ಕ್ಯಾಬ್, ಆಟೋ ಚಾಲಕರಿಗೆ ಪ್ರತಿ ಚಾಲಕನಿಗೆ 3000 ಸಹಾಯಧನ. ಕಟ್ಟಡ ಕಾರ್ಮಿಕರಿಗೆ ತಲಾ 3000 ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ಅಲ್ಲದೆ ಇದೇ ವೇಳೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಅನಿವಾರ್ಯ ಎಂದಿದ್ದಾರೆ,








