ಬೆಂಗಳೂರು: ಹಿರಿಯ ಪತ್ರ ಮಹದೇವ್ ಪ್ರಕಾಶ್ ರಾಜೀನಾಮೆಯಿಂದ ತೆರವಾಗಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಸ್ಥಾನಕ್ಕೆ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ.
2008ರಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಎನ್.ಭೃಂಗೀಶ್ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಹೀಗಾಗಿ ಅಂದು ಯಡಿಯೂರಪ್ಪ ಆಪ್ತ ಅಧಿಕಾರಿಗಳ ವಲಯದಲ್ಲಿ ಭೃಂಗೀಶ್ ಗುರುತಿಸಿಕೊಂಡಿದ್ದರು. ಇದೇ ಮಾನದಂಡವನ್ನು ಇಟ್ಟುಕೊಂಡು ಯಡಿಯೂರಪ್ಪ ಅವರು ಭಂಗೇಶ್ವರ ನೇಮಕಾತಿ ಕುರಿತು ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

ವಾರ್ತಾ ಇಲಾಖೆಯ ನಿರ್ದೇಶಕರಾಗಿ ಕೆಲಸ ಮಾಡಿದ್ದ ಎನ್. ಭೃಂಗೀಶ್ ಇತ್ತೀಚೆಗಷ್ಟೇ ನಿವೃತ್ತರಾಗಿದದ್ದರು. ವಾರ್ತಾ ಇಲಾಖೆಯಲ್ಲಿ ಸುದೀರ್ಘ 30 ವರ್ಷಗಳ ಸೇವೆಯ ಬಳಿಕ ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ 30 ವರ್ಷಗಳ ಸೇವೆಯಲ್ಲಿ 25 ವರ್ಷಗಳಷ್ಟು ಸುಧೀರ್ಘವಾಗಿ ಮುಖ್ಯಮಂತ್ರಿಗಳ ಸಚಿವಾಯಲದಲ್ಲಿಯೇ ಭೃಂಗೀಶ್ ಅವರು ಸೇವೆ ಸಲ್ಲಿಸಿದ್ದಾರೆ.
1990ರಲ್ಲಿ ರಾಜ್ಯ ವಾರ್ತಾ ಇಲಾಖೆ ಸೇರಿದ್ದ ಭೃಂಗೀಶ್ ಅವರು 10ಕ್ಕೂ ಹೆಚ್ಚು ಮುಖ್ಯಮಂತ್ರಿಗಳಿಗೆ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಕೆಲ ದಿನಗಳ ಹಿಂದಷ್ಟೆ ಮಹಾದೇವ್ ಪ್ರಕಾಶ್ ಅವರು ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಭೃಂಗೀಶ್ ಅವರನ್ನು ನೇಮಕವಾಗಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








