ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಹೊಡೆತಕ್ಕೆ ಇಡೀ ದೇಶವೇ ಸ್ತಬ್ಧವಾಗಿದೆ. ಹೀಗಾಗಿ ನಾಗರಿಕರ ಮನೆಗಳಿಗೆ ಅಗತ್ಯ ವಸ್ತುಗಳನ್ನು ತಲುಪಿಸುವ ಉದ್ದೇಶದಿಂದ ಹೋಮ್ ಡಿಲಿವರಿ ಸಹಾಯವಾಣಿಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಬಿಬಿಎಂಪಿ ವತಿಯಿಂದ ನಗರದಾದ್ಯಂತ ಹೋಮ್ ಡಿಲಿವರಿ ಸೇವೆ ಒದಗಿಸಲಾಗುತ್ತದೆ. ಜನರು ಮನೆಗಳಿಂದ ಹೊರಬರದಂತೆ ನಿಯಂತ್ರಿಸುವ ಉದ್ದೇಶದಿಂದ ಈ ಸೇವೆ ಆರಂಭಿಸಲಾಗಿದೆ. 080 6191 4960 ಈ ನಂಬರ್ ಗೆ ಕರೆ ಮಾಡಿದ್ರೆ ಸಾಕು ನಿಮ್ಮ ಮನೆ ಬಾಗಿಲಿಗೆ ಅಗತ್ಯ ವಸ್ತುಗಳು ಬರಲಿವೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಹಾಯವಾಣಿಗೆ ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ್, ಸಂಸದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಕಂದಾಯ ಸಚಿವ ಆರ್.ಅಶೋಕ್, ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಉಪಸ್ಥಿತರಿದ್ದರು.








