ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಕ್ರಮ ಗಣಿಗಾರಿಕೆಗೆ ಸಿಎಂ ಯಡಿಯೂರಪ್ಪ ಕುಮ್ಮಕ್ಕು: ರಾಜಾಹುಲಿ ವಿರುದ್ಧ ತೊಡೆತಟ್ಟಿದ ಟಗರು..!

Kariyappa N by Kariyappa N
January 24, 2021
in Newsbeat, Politics, Samagra karnataka, Uncategorized, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಯಡಿಯೂರಪ್ಪ ಅವರ ಕುಮ್ಮಕ್ಕು ಕಾರಣ ಎಂದು ದೂರಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

February 11, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯೇ ಅಪರಾಧ. ಅದಕ್ಕೆ ಏನು ಶಿಕ್ಷೆ ? ಅರ್ಜಿ ಹಾಕಿಕೊಂಡು ಅಕ್ರಮವನ್ನು ಸಕ್ರಮ ಮಾಡಿಕೊಳ್ಳಿ ಎಂದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಳಬಹುದೇ ? ಎಂದು ಪ್ರಶ್ನಿಸಿದರು.

Yeddyurappa
ಇದು ಅಕ್ರಮ ಮನೆ, ಜಮೀನು ಸಕ್ರಮ ಮಾಡುವುದಲ್ಲ. ಹಾಗಾದರೆ ಗಣಿ ಇಲಾಖೆಯ ಕಾನೂನು ಇರುವುದೇಕೆ. ಮುಖ್ಯಮಂತ್ರಿಗಳ ಹೇಳಿಕೆ ಖಂಡನೀಯ. ಬೇಜವಾಬ್ದಾರಿತನದ ಪರಮಾವಧಿ. ಮುಖ್ಯಮಂತ್ರಿಗಳೇ ಕಾನೂನು ಬಾಹಿರ ಕ್ರಮಗಳನ್ನು ಸಕ್ರಮ ಮಾಡುತ್ತೇವೆ ಎಂದು ಹೇಳುವುದು ಸರಿಯಲ್ಲ. ಅದು ಅಕ್ರಮಗಳಿಗೆ ಸಹಕರಿಸಿದಂತೆ ಆಗುತ್ತದೆ. ರಾಜ್ಯದ ಯಾವುದೇ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರಲಿ, ಅದರಲ್ಲಿ ಯಾವುದೇ ಪಕ್ಷದವರು ಭಾಗಿಯಾಗಿರಲಿ. ಸರ್ಕಾರ ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದರು.

ಸಿಎಂ, ಉಸ್ತುವಾರಿ ಸಚಿವರೇ ಹೊಣೆ
ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿರುವ ದುರಂತ ಕುರಿತು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದೆ. ಆಂಧ್ರದಿಂದ ಪರವಾನಿಗೆ ಇಲ್ಲದೆ ಜಿಲಿಟಿನ್ ಮತ್ತು ಡೈನಮೇಟ್ ತರಲಾಗಿತ್ತು. ಇದು ಮೊದಲ ಅಪರಾಧ. ತಂದಿದ್ದನ್ನು ಸುರಕ್ಷಿತವಾದ ಜಾಗದಲ್ಲಿ ಇಡದೇ ಹೋಗಿದ್ದಿದು ಎರಡನೇ ಅಪರಾಧ. ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯ ಈ ದುರಂತದಲ್ಲಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.

blast
ಎಂಎಲ್‍ಸಿ ಆಯನೂರು ಮಂಜುನಾಥ್ ಅವರೇ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಕಡೆ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ ಎಂದು ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲಿಯೇ ಪರವಾನಿಗೆ ಇಲ್ಲದೆ ಯದ್ವಾತದ್ವಾ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದರೆ ಇದು ಜಿಲ್ಲಾಡಳಿತರ ವೈಫಲ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರು ಇದರ ಹೊಣೆ ಹೊರಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಈಶ್ವರಪ್ಪ ಅವರು ಮಾತನಾಡುವಾಗ ಊರಿನ ಒಳ್ಳೆಯದಕ್ಕೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಕಣ್ಣು ಮುಚ್ಚಿಕೊಂಡಿರಿ ಎಂದು ಸಲಹೆ ನೀಡಿದ್ದಾರೆ. ಜನಪ್ರತಿನಿಧಿಯೇ ಹೀಗೇ ಹೇಳಿದ ಬಳಿಕ ಅಧಿಕಾರಿಗಳು ಬೇವಾಬ್ದಾರಿಯಿಂದ ಕೆಲಸ ಮಾಡದೆ ಇನ್ನೇನು ಮಾಡಿಯಾರು ? ಜಿಲ್ಲೆಯಲ್ಲಿ ಎಲ್ಲ ಕ್ವಾರಿಗಳು ಮತ್ತು ಕ್ರಷರ್‍ಗಳು ಸಕ್ರಮವಾಗಿ ನಡೆಯುತ್ತಿವೆ ಎಂದೂ ಈಶ್ವರಪ್ಪ ಅವರೇ ಹೇಳಿದ್ದಾರೆ. ಆದರೆ, ಆಯನೂರು ಮಂಜುನಾಥ್ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದಿದ್ದಾರೆ.


ನೂರು ಮಂಜುನಾಥ್ ಮತ್ತು ಈಶ್ವರಪ್ಪ ಅವರ ಹೇಳಿಕೆ ಹಿನ್ನೆಲೆಯಲ್ಲಿ ಸತ್ಯ ಏನೆಂದು ಗೊತ್ತಾಗಬೇಕು. ಮೃತರ ಕುಟುಂಬದವರಿಗೆ ನ್ಯಾಯಯುತ ಪರಿಹಾರ ಘೋಷಣೆ ಮಾಡಬೇಕು. ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕು. ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಆಗಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ
ಯಾರೋ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಹಂ.ಪಾ. ನಾಗರಾಜಯ್ಯ ಅವರನ್ನು ಮಂಡ್ಯ ಪೊಲೀಸರು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿರುವುದು ಇಡೀ ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ. ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದ್ದೇವೆಯೋ ಅಥವಾ ಇಲ್ಲವೋ ಎಂಬ ಅನುಮಾನ ಇದರಿಂದ ಉಂಟಾಗಿದೆ.
ನರೇಂದ್ರ ಮೋದಿಯವರ ಸರ್ಕಾರ ಆರಂಭದಲ್ಲಿ ಧರ್ಮರಾಯನಂತೆ ಇತ್ತು. ಈಗ ದುರ್ಯೋದನನ ಸರ್ಕಾರವಾಗಿದೆ ಎಂದು ಹಂಪನಾ ಅವರು ಹೇಳಿದ್ದಾರೆ. ಇದರಲ್ಲಿ ಮಾನಹಾನಿಯಾಗುವ ಅಂಶ ಏನಿದೆ. ದೇಶದ ಪ್ರತಿಯೊಬ್ಬ ನಾಗರಿಕರಿಗೂ ಅವರ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ಹಕ್ಕು ಇದೆ. ಯಾರೂ ಅದನ್ನು ನಿಯಂತ್ರಿಸಲು ಆಗದು.
ಹಂ.ಪಾ. ನಾಗರಾಜಯ್ಯ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ. ಯಾರೋ ದೂರು ಕೊಟ್ಟರು ಎಂಬ ಕಾರಣಕ್ಕೆ ಹಿರಿಯ ಸಾಹಿತಿಯನ್ನು ಠಾಣೆಗೆ ಕರೆಯಿಸಿಕೊಂಡು ವಿಚಾರಣೆ ನಡೆಸುವುದು ಪ್ರಜಾಸತ್ತೆಗೆ ಮಾಡಿದ ಅವಮಾನ. ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಯಡಿಯೂರಪ್ಪ ಅವರಿಗೆ ಗೌರವ ಇದ್ದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕು.
ಬೆಂಗಳೂರಿನಲ್ಲಿ ಇತ್ತೀಚೆಗೆ ಕಾಂಗ್ರೆಸ್ ನಡೆಸಿದ ರಾಜಭವನ ಚಲೋ ವೇಳೆ ನಡೆದ ಘಟನೆ ಸಂಬಂಧ ಶಾಸಕರಾದ ಸೌಮ್ಯ ರೆಡ್ಡಿಯವರೇ ದೂರು ನೀಡಿದ್ದಾರೆ. ಆ ದೂರು ಏನಾಯಿತು. ಸೌಮ್ಯ ರೆಡ್ಡಿ ಹಾಗೂ ಅವರ ವಿರುದ್ಧ ನೀಡಿರುವ ದೂರುಗಳನ್ನೂ ಸ್ವೀಕಾರ ಮಾಡಿ ತನಿಖೆ ಜರುಗಿಸಲಿ. ಸೌಮ್ಯರೆಡ್ಡಿ ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಅದರು ಅವರ ದೊಡ್ಡಗುಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564

 

28ರಂದು ಕಾಂಗ್ರೆಸ್ ಶಾಸಕಾಂಗ ಸಭೆ
ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 28 ರಂದು ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ವಿಧಾನ ಪರಿಷತ್ ಉಪ ಸಭಾಪತಿ ಚುನಾವಣೆಗೆ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಅಂದು ತೀರ್ಮಾನ ಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿಯ ಎಡಗೈ ಗುಂಪಿನ ನಾಯಕರಿಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ನೀಡಬೇಕು. ಇದು ನನ್ನ ಅಭಿಪ್ರಾಯ ಎಂದು ಸಿದ್ದರಾಂಯ್ಯ ಹೇಳಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CM YeddyurappaHunasodu blastIllegal miningks eswarappaSiddaramaiah
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram