ಬೀದರ್: ವಚನ ಚಳವಳಿಯ ರೂವಾರಿ, ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಗಮಿಸುತ್ತಿದ್ದು, 600 ಕೋಟಿ ರೂ. ವೆಚ್ಚದ ಅನುಭವ ಮಂಟಪಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ನಿಧನದಿಂದ ತೆರವಾಗಿರುವ ಬಸವಕಲ್ಯಾನ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆ ಘೋಷಣೆ ಆಗಿಲ್ಲ. ಕೆಲವೇ ದಿನಗಳಲ್ಲಿ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ಭೇಟಿ ನೀಡುತ್ತಿದ್ದು, 600 ಕೋಟಿ ವೆಚ್ಚದ ಅನುಭವ ಮಂಟಪ್ಪೆ ಶಿಲಾನ್ಯಾಸ ನೆರವೇರಿಸುವ ಮೂಲಕ ಭರಪೂರ ಕೊಡುಗೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564.
ನಾರಾಯಣರಾವ್ ಮೃತಪಟ್ಟು ಫೆಬ್ರುವರಿಗೆ ಆರು ತಿಂಗಳು ಆಗಲಿದೆ. ಅಷ್ಟರೊಳಗೆ ಉಪಚುನಾವಣೆ ನಡೆಸುವುದು ಚುನಾವಣಾ ಆಯೋಗಕ್ಕೆ ಅನಿವಾರ್ಯವಾಗಿದೆ. ಹೀಗಾಗಿ ಕೆಲವೇ ದಿನಗಳಲ್ಲಿ ಬಸವಕಲ್ಯಾಣ ಉಪ ಚುನಾವಣೆ ಘೋಷಣೆಯಾಗಲಿದೆ ಎಂಬುದು ಸಿಎಂ ಯಡಿಯೂರಪ್ಪ ಅವರಿಗೂ ಗೊತ್ತು. ಹೀಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಬಸವಕಲ್ಯಾಣದಲ್ಲಿ ನೇರ ಹಣಾಹಣಿ ಏರ್ಪಡುವ ಸಾಧ್ಯತೆಗಳಿವೆ. ಈ ಕಾರಣದ ಭಾಗವಾಗಿಯೇ ಯಡಿಯೂರಪ್ಪ ಬಸವಕಲ್ಯಾಣಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ ಎನ್ನಲಾಗಿದೆ.
ಬಸವಕಲ್ಯಾಣದ ಮೇಲೆ ಹಿಡಿತ ಸಾಧಿಸಲು ಅನುಭವ ಮಂಟಪಕ್ಕೆ ಶಿಲಾನ್ಯಾಸ ಮಾಡುತ್ತಿರುವುದನ್ನು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ. ಬಿಜೆಪಿ ಸರಕಾರ ಬಂದು 18 ತಿಂಗಳಾಯಿತು, ಇಲ್ಲಿಯವರೆಗೂ ಇವರಿಗೆ ಬಸವಕಲ್ಯಾಣ ನೆನಪಾಗಿಲ್ಲ. ಬಸವಕಲ್ಯಾಣ ಅಭಿವೃದ್ಧಿಗೆ ಒಂದು ರೂಪಾಯಿಯನ್ನು ನೀಡಿಲ್ಲ. ಉಪ ಚುನಾವಣೆ ಘೋಷಣೆ ಬರುತ್ತದೆ ಎಂದಾಗ ಈಗ ಇವರಿಗೆ ಬಸವಕಲ್ಯಾಣ ನೆನಪಾಯಿತೇ ಎಂದು ಹರಿಹಾಯ್ದಿದ್ದಾರೆ.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇದಕ್ಕೂ ಮೊದಲು ಸಿಎಂ ಯಡಿಯೂರಪ್ಪ ಬೀದರ್‍ನ 100 ಹಾಸಿಗೆಗಳ ಜಿಲ್ಲಾಸ್ಪತ್ರೆ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








