ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ. ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಗೆ ದಾಖಲೆಯಾಗಿದ್ದರು.
ಅಪೋಲೊ ಆಸ್ಪತ್ರೆಯ ಹೃದ್ರೋಗ ವಿಭಾಗದ ಹಿರಿಯ ತಜ್ಞ ಡಾ. ಬಿ.ಸಿ. ಶ್ರೀನಿವಾಸ್ ಅವರ ನೇತೃತ್ವದಲ್ಲಿ ವಿಶೇಷ ವೈದ್ಯಕೀಯ ತಂಡ ಪಾರ್ವತಿ ಅವರ ಚಿಕಿತ್ಸೆಯನ್ನು ಮುಂದುವರಿಸುತ್ತಿದೆ. ಆಸ್ಪತ್ರೆ ಮೂಲಗಳ ಪ್ರಕಾರ, ಪಾರ್ವತಿ ಅವರು ನೀಡಲಾಗುತ್ತಿರುವ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಶೀಘ್ರದಲ್ಲೇ ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.
ಪ್ರಸ್ತುತ ಅವರಿಗೆ ಎನ್‌ಐವಿ (NIV) ಉಪಕರಣದ ಮೂಲಕ ಉಸಿರಾಟ ಸಹಾಯ ನೀಡಲಾಗುತ್ತಿದ್ದು, ಮೂತ್ರವರ್ಧಕ ಔಷಧಗಳು ಹಾಗೂ ಹೃದಯ ಸಂಬಂಧಿತ ಚಿಕಿತ್ಸೆಗಳನ್ನು ಮುಂದುವರಿಸಲಾಗಿದೆ.








