ಬೆಂಗಳೂರು: ಮುಡಾ ಹಗರಣ ಈಗಾಗಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿದೆ. ವಿರೋಧಿಗಳು ಈಗಾಗಲೇ ಇದೇ ವಿಷಯ ಮುಂದಿಟ್ಟುಕೊಂಡು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಚನೆಯ ಮೇರೆಗೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದಂತೆ ಎಫ್ ಐಆರ್ ದಾಖಲಾದ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ.
14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಮುಂದಾಗಿದ್ದಾರೆ. ಈ ಸಂಬಂಧ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ನನಗೆ ಆ ನಿವೇಶನಗಳು ಬೇಡ ಎಂದು ಪತ್ರ ಬರೆದಿದ್ದಾರೆ ಎನ್ನಲಾಗಿದೆ.