ಡಿಸೆಂಬರ್ ವೇಳೆಗೆ ದೇಶದ ಪ್ರತಿಯೊಬ್ಬರು ಲಸಿಕೆ ಲಭ್ಯ – ಜೆ.ಪಿ ನಡ್ಡಾ
ನವದೆಹಲಿ: ದೇಶದಲ್ಲಿ ಕೋವಿಡ್ 2ನೇ ಅಲೆ ಭೀತಿಗೆ ಜನ ತತ್ತರಿಸಿ ಹೋಗಿದ್ದಾರೆ. ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಲಸಿಕೆ ಕೊರತೆಯು ಉಂಟಾಗಿದೆ. ಆದ್ರೆ ಲಸಿಕೆ ಅಭಾವ ಸಮಸ್ಯೆ ಶಿಘ್ರದಲ್ಲೇ ಸರಿಹೋಗಲಿದೆ ಎಂದುಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ ವೇಳೆಗೆ ದೇಶದಲ್ಲಿರುವ ಎಲ್ಲರಿಗೂ ಕೊರೊನಾ ಲಸಿಕೆ ಸಿಗಲಿದೆ ಎಂದು ತಿಳಿಸಿದ್ದಾರೆ.
ರಾಜಸ್ಥಾನದ ಕೋವಿಡ್ ಪರಿಸ್ಥಿತಿ ಕುರಿತು ವರ್ಚುವಲ್ ಮಾತುಕತೆ ವೇಳೆ ಮಾತನಾಡಿದ ಅವರು, ಲಸಿಕೆ ಕುರಿತು ಕಾಂಗ್ರೆಸ್ ದೇಶದ ಜನರ ದಾರಿ ತಪ್ಪಿಸುತ್ತಿದೆ. ಕೊರೊನಾ ಸೋಂಕು ದೇಶದಲ್ಲಿ ಹೆಚ್ಚಾಗುತ್ತಿರುವಾಗ ಈ ರೀತಿ ಲಸಿಕೆ ಕುರಿತು ಆರೋಪ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ದೇಶದಲ್ಲಿ ಈಗಾಗಲೇ ಎರಡು ಸ್ವದೇಶಿ ಲಸಿಕೆಯನ್ನು ಕಳೆದ 9 ತಿಂಗಳ ಅಂತರದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈವರೆಗೆ ದೇಶದ 18 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆ ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








