ಚಿಕ್ಕಮಗಳೂರು: ವಿಧಾನಪರಿಷತ್ ನ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಸೂಕ್ಷ್ಮ ಮನಸಿನವರಾದ ಎಸ್.ಎಲ್ ಧರ್ಮೇಗೌಡರು, ಸತತ ಹೋರಾಟದಿಂದಲೇ ತಳಮಟ್ಟದಿಂದ ರಾಜಕೀಯ ಜೀವನ ಆರಂಭಿಸಿ ಉನ್ನತಮಟ್ಟಕ್ಕೆ ಬಂದಿದ್ದರು.
ಎಸ್.ಎಲ್ ಧರ್ಮೇಗೌಡ ಸಕ್ಕರಾಯಪಟ್ಟಣದ ದಿವಂಗತ ಮಾಜಿ ಶಾಸಕ ಎಸ್.ಆರ್ ಲಕ್ಷ್ಮಯ್ಯನವರ ಪುತ್ರ. ಗ್ರಾಮ ಪಂಚಾಯಿತಿಯಿಂದ, ಜಿಲ್ಲಾ ಪಂಚಾಯಾತ್ ಸದಸ್ಯರಾಗಿ, ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿ, ವಿಧಾನ ಪರಿಷತ್ ನ ಉಪ ಸಭಾಪತಿಯಾಗಿಯೂ ಸೇವೆ ಸಲ್ಲಿದ್ದ ಎಸ್.ಎಲ್ ಧರ್ಮೇಗೌಡರ ಸೇವೆಯನ್ನು ಪರಿಗಣಿಸಿ ಸಹಕಾರಿ ರತ್ನ ಎಂಬ ಪ್ರಶಸ್ತಿಗೂ ಭಾಜನರಾಗಿದ್ದರು.
ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯವರಾದ ಎಸ್.ಎಲ್ ಧರ್ಮೇಗೌಡ 1955 ಡಿಸೆಂಬರ್ 16 ರಂದು ಸರಪನಹಳ್ಳಿಯಲ್ಲಿ ಜನಿಸಿದರು. ಚಿಕ್ಕಮಗಳೂರು ತಾಲೂಕು ಬಿಳೇಕಲ್ಲಹಳ್ಳಿ ಮಂಡಲ ಪಂಚಾಯತ್ ಸದಸ್ಯರಾಗಿ, ಮಂಡಲ ಪಂಚಾಯತ್ ಪ್ರಧಾನರಾಗುವ ಮೂಲಕ ರಾಜಕೀಯ ರಂಗ ಪ್ರವೇಶಿಸಿದ್ದರು.
ಮಂಡಲ ಪಂಚಾಯತ್ ಸದಸ್ಯರಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಎಸ್.ಎಲ್ ಧರ್ಮೇಗೌಡ, ನಂತರ ಚಿಕ್ಕಮಗಳೂರು ತಾಲೂಕು ಎಪಿಎಂಸಿ ಅಧ್ಯಕ್ಷರಾಗಿ, ಚಿಕ್ಕಮಗಳೂರು ಭೂಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ, ಉದ್ದೇಬೋರನಹಳ್ಳಿ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ, ಬಿಳೇಕಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷರಾಗಿ, ಹಾಸನ ಹಾಲು ಒಕ್ಕೂಟದ ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಅಧ್ಯಕ್ಷರಾಗಿ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ, ಚಿಕ್ಕಮಗಳೂರು ಜನತಾ ಬಜಾರ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಎಸ್.ಎಲ್ ಧರ್ಮೇಗೌಡ ಕರ್ನಾಟಕ ರಾಜ್ಯ ಮಾರಾಟ ಮಹಾ ಮಂಡಳದ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ, ವಿಮಾ ಸಹಕಾರ ಸಂಘದ ನಿರ್ದೇಶಕ, ರಾಜ್ಯ ಕೈಗಾರಿಕಾ ಬ್ಯಾಂಕ್ ನಿರ್ದೇಶಕ, ನವದೆಹಲಿಯ ಕ್ರಿಬ್ಕೊ ಸಂಸ್ಥೆ ನಿರ್ದೇಶಕ, ನ್ಯಾಫೆಡ್ ಸಂಸ್ಥೆ ನಿರ್ದೇಶಕ, ಇಂಡಿಯನ್ ಪೆÇಟಾಷ್ ಲಿಮಿಟೆಡ್ ನಿರ್ದೇಶಕ, ಎಸಿಡಿಸಿ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಒಂದು ಬಾರಿ ತಾಲೂಕು ಪಂಚಾಯತ್ ಸದಸ್ಯ, ಎರಡು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಏಕ ಕಾಲಕ್ಕೆ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್‍ಗೆ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಆಯ್ಕೆಯಾದ ಹೆಗ್ಗಳಿಕೆಗೂ ಪಾತ್ರರಾಗಿದ್ದರು.
ಬೀರೂರು ಕ್ಷೇತ್ರದಿಂದ ಜನತಾ ದಳದಿಂದ ಒಂದು ಬಾರಿ ಶಾಸಕರಾಗಿಯೂ ಆಯ್ಕೆಯಾಗಿದ್ದರು. ನಂತರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದ ನಂತರ ಎಸ್.ಎಲ್ ಧರ್ಮೇಗೌಡ ಅವರನ್ನು ವಿಧಾನ ಪರಿಷತ್‍ಗೆ ನೇಮಕ ಮಾಡಲಾಗಿತ್ತು. ನಂತರ ಉಪ ಸಭಾಪತಿ ಸ್ಥಾನವೂ ದಕ್ಕಿತ್ತು.
ಇತ್ತಿಚೆಗೆ ನಡೆದ ಅಧಿವೇಶನದಲ್ಲಿ ವಿಧಾನಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ಪ್ರಕರಣದಲ್ಲಿ ಸಭಾಪತಿ ಪೀಠದಲ್ಲಿ ಕುಳಿತಿದ್ದ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಅವರನ್ನು ಸದಸ್ಯರು ಎಳೆದಾಡಿ ಗಲಾಟೆ ಮಾಡಿದ್ದರು. ಈ ಕುರಿತು ಧರ್ಮೇಗೌಡ ಆಪ್ತರ ಬಳಿ ಪರಿಷತ್ ಗಲಾಟೆ ಬಗ್ಗೆ ಹೇಳಿಕೊಂಡಿದ್ದರು ಎನ್ನಲಾಗಿದೆ. ಪರಿಷತ್ ನಲ್ಲಿ ಜರುಗಿದ ಘಟನೆಯಿಂದ ಖಿನ್ನರಾಗಿದ್ದರೆಂದು ಹೇಳಲಾಗುತ್ತಿದ್ದು, ಅದರೊಂದಿಗೆ ಡಿ.ಸಿ.ಸಿ ಬ್ಯಾಂಕ್ ನ ಸೋಲು ಸಹ ಅವರನ್ನು ಕಂಗೆಡಿಸಿತ್ತು. ಇದು ಇತ್ತೀಚೆಗೆ ಭಾಗವಹಿಸಿದ ವೇದಿಕೆಗಳಲ್ಲಿ ಅಸಹನೆ ವ್ಯಕ್ತಪಡಿಸಿದ್ದು ಸಹ ಉಲ್ಲೇಖನೀಯ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel