ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹಾವಳಿ ಮಿತಿ ಮೀರುತ್ತಿದ್ದು, ಕೇವಲ ಸಿದ್ದಾಪುರಕ್ಕೆ ಮಾತ್ರ ಸೀಮಿತವಾಗಿದ್ದದ್ದು, ಸದ್ಯ ಅಂಕೋಲಾಗೂ ಎಂಟ್ರಿ ಕೊಟ್ಟಿದೆ.
ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ ಕಾಯಿಲೆ ಕಂಡು ಬಂದಿದೆ. ಕಾಡಿನಂಚಿನಲ್ಲಿನ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಗೆ ಕಾಡಿನಲ್ಲಿ ಮಂಗ ಸಾವನಪ್ಪಿರುವ ಹಿನ್ನೆಲೆಯಲ್ಲಿ ಈ ಕಾಯಿಲೆ ಅಂಟಿಕೊಂಡಿರಬಹುದು ಎಂದು ಶಂಕಿಸಲಾಗುತ್ತಿದೆ.
ಸದ್ಯ ಜಿಲ್ಲೆಯಲ್ಲಿ ಈಗಾಗಲೇ ಇಬ್ಬರು ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ಅಲ್ಲದೇ, 46 ಪ್ರಕರಣಗಳು ಪತ್ತೆಯಾಗಿವೆ. ಸಿದ್ದಾಪುರ ತಾಲೂಕಿನಲ್ಲಿಯೇ 45 ಹಾಗೂ ಅಂಕೊಲಾ ತಾಲೂಕಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ.