ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ (Delhi) 2 ಸಾವಿರ ಕೋಟಿ ರೂ. ಮೌಲ್ಯದ ಕೊಕೇನ್ (Cocaine)ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
2 ಸಾವಿರ ಕೋಟಿ ರೂ. ಮೌಲ್ಯದ 200 ಕೆ.ಜಿ ಕೊಕೇನ್ ನ್ನು ವಶಕ್ಕೆ ಪಡೆಯುವ ಮೂಲಕ ಬೃಹತ್ ಜಾಲವನ್ನು ಭೇದಿಸಿದ್ದಾರೆ. ಡ್ರಗ್ಸ್ ಪೂರೈಕೆದಾರನನ್ನು ಜಿಪಿಎಸ್ ಮೂಲಕ ರಮೇಶ ನಗರದಲ್ಲಿ ಪತ್ತೆ ಹಚ್ಚಲಾಗಿದೆ. ಆದರೆ ಆರೋಪಿಗಳು ಲಂಡನ್ ಗೆ ಪರಾರಿಯಾಗಿದೆ ಎನ್ನಲಾಗಿದೆ.
ಆದರೆ, ಪೊಲೀಸರು ಪೂರೈಕೆದಾರನನ್ನು ಪತ್ತೆಹಚ್ಚುವಲ್ಲಿ ಯಶ್ವಸಿಯಾಗಿದ್ದು, 5,600 ಕೋಟಿ ರೂ. ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ಸದ್ಯದ ಮಾಹಿತಿಯಂತೆ ಜಸ್ಸಿ ಎಂದು ಕರೆಯಲ್ಪಡುವ ಜಿತೇಂದ್ರ ಪಾಲ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪಂಜಾಬ್ ಅಮೃತಸರದ ವಿಮಾನ ನಿಲ್ದಾಣದ ಬಳಿ ಯುಕೆಗೆ ಪ್ರಯಾಣಿಸಲು ಮುಂದಾಗಿದ್ದಾಗ ಆತನನ್ನು ಬಂಧಿಸಿದ್ದಾರೆ.
ಈ ಜಾಲವು ದೆಹಲಿ, ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದುಬೈಗೆ ಸಂಪರ್ಕವನ್ನು ಹೊಂದಿದೆ. ಸದ್ಯ ಈ ಕುರಿತು ತನಿಖೆ ನಡೆಸುತ್ತಿದ್ದಾರೆ.