ಕೊಯಮತ್ತೂರು – ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕೇಸ್ ದಾಖಲು
ಕೊಯಮತ್ತೂರು, ಅಗಸ್ಟ್ 28: ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಕುಪ್ಪುಸಾಮಿ ಅಣ್ಣಾಮಲೈ ವಿರುದ್ಧ ಕಾನೂನುಬಾಹಿರ ಸಭೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಕೊಯಮತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಣ್ಣಾಮಲೈ ಜೊತೆಗೆ ಇತರ ನಾಲ್ಕು ಬಿಜೆಪಿ ಕಾರ್ಯಕರ್ತರಾದ ಜಿಲ್ಲಾಧ್ಯಕ್ಷ ಆರ್.ನಂದಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಕೆ.ಶೆಲ್ವಕುಮಾರ್, ರಾಜ್ಯ ಖಜಾಂಚಿ ಎಸ್.ಆರ್.ಸೇಕರ್ ಮತ್ತು ರಾಜ್ಯ ಉಪಾಧ್ಯಕ್ಷ ಕನಗಸಬಪತಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅವರ ಜೊತೆಗೆ ಇತರ ನಾಲ್ಕು ಬಿಜೆಪಿ ಕಾರ್ಯಕರ್ತರಾದ ಜಿಲ್ಲಾಧ್ಯಕ್ಷ ಆರ್.ನಂದಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಕೆ.ಶೆಲ್ವಕುಮಾರ್, ರಾಜ್ಯ ಖಜಾಂಚಿ ಎಸ್.ಆರ್.ಸೇಕರ್ ಮತ್ತು ರಾಜ್ಯ ಉಪಾಧ್ಯಕ್ಷ ಕನಗಸಬಪತಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ, ಕೊಯಮತ್ತೂರು ನಗರದ ಪೊಲೀಸ್ ಠಾಣೆ ಐಪಿಸಿಯ ಸೆಕ್ಷನ್ 143, 341, 269 ಮತ್ತು 285 ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ಐವರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ.
ಕಳೆದ ಸೆಪ್ಟೆಂಬರ್ನಲ್ಲಿ ಸೇವೆಗೆ ರಾಜೀನಾಮೆ ನೀಡಿದ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರು ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ಪಕ್ಷದ ತಮಿಳುನಾಡು ಮುಖ್ಯಸ್ಥ ಎಲ್ ಮುರುಗನ್ ಅವರ ಉಪಸ್ಥಿತಿಯಲ್ಲಿ ಮಂಗಳವಾರ ನವದೆಹಲಿಯಲ್ಲಿ ಬಿಜೆಪಿಗೆ ಸೇರಿದ್ದರು.
ಗುರುವಾರ ಅವರು ಕೊಯಮತ್ತೂರಿನ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಪಕ್ಷದ ಕಚೇರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಕಾರ್ಯಕರ್ತರ ಗುಂಪೊಂದು ಭಗವಾನ್ ಮುರುಗನ್ ನ ದೈವಿಕ ಆಸ್ತ್ರ ಈಟಿಯನ್ನು ಅವರಿಗೆ ಅರ್ಪಿಸುವ ಮೂಲಕ ಕಚೇರಿಯ ಮುಂದೆ ಅವರನ್ನು ಸ್ವಾಗತಿಸಿತು. ನಂತರ ಅವರು ಮಾಧ್ಯಮಗಳ ಜೊತೆಗೆ ಮತ್ತು ಪಕ್ಷದ ಸದಸ್ಯರನ್ನುದ್ದೇಶಿಸಿ ಮಾತನಾಡಿದರು.
ನಗರದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಮತ್ತು ಇತರ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಸ್ಥಳದಲ್ಲಿ ಜನಸಮೂಹವನ್ನು ಒಟ್ಟುಗೂಡಿಸುವ ಮೂಲಕ ಸಮಾರಂಭವನ್ನು ನಡೆಸಿದ್ದಾರೆ. ಆದರೆ ನಗರದಲ್ಲಿ ಲಾಕ್ ಡೌನ್ ಪ್ರೋಟೋಕಾಲ್ ಜಾರಿಯಲ್ಲಿದೆ. ಆದ್ದರಿಂದ, ಪೊಲೀಸರು ಅಣ್ಣಾಮಲೈ, ನಂದಕುಮಾರ್, ಸೆಲ್ವಕುಮಾರ್, ಸೆಕರ್ ಮತ್ತು ಕನಗಸಬಪತಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.