ಢಾಕಾ: ಎರಡು ರೈಲುಗಳು ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಕನಿಷ್ಠ 20 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಲ್ಲದೇ, ಘಟನೆಯಲ್ಲಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆ ಬಾಂಗ್ಲಾದೇಶದ (Bangladesh) ಭೈರಬ್ನಲ್ಲಿ ನಡೆದಿದೆ.
ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ರೈಲಿನ ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದೆ.
ಇಲ್ಲಿಯವರೆಗೆ ಘಟನಾ ಸ್ಥಳದಿಂದ 20 ಶವಗಳನ್ನು ಹೊರ ತೆಗೆಯಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ಈ ಕುರಿತು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.