ಎರಡು ಕಾರುಗಳ ಮಧ್ಯೆ ಡಿಕ್ಕಿ | 10ಕ್ಕೂ ಹೆಚ್ಚು ಮಂದಿಗೆ ಗಾಯ chamarajanagara saaksha tv
ಚಾಮರಾಜನಗರ : ಎರಡು ಕಾರುಗಳ ಮಧ್ಯೆ ಡಿಕ್ಕಿಯಾಗಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಂಗಲ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಚ್.ಡಿ ಕೋಟೆ ತಾಲೂಕಿನ ಹಂಪಾಪುರ ಗ್ರಾಮದ ರವಿ (30), ರೇವಣ್ಣ (42), ಮಹದೇವ (52), ಶಿವಪ್ಪ (60), ರಾಚೇಗೌಡ (55), ಕೆಂಡಗಣ್ಣೇಗೌಡ (70), ನಾಗರಾಜು (75) ಹಾಗೂ ಬಸವೇಗೌಡ (76) ಹಾಗೂ ಮಹೇಶ್ (45) ಎಂಬುವರು ಗಾಯಗೊಂಡಿದ್ದಾರೆ.
ಇವರು ಓಮ್ನಿ ಕಾರಿನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಹನೂರಿನಿಂದ ಕೊಳ್ಳೇಗಾಲ ಮಾರ್ಗವಾಗಿ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರು ಪಲ್ಟಿಯಾಗಿದೆ.
ಈ ಘಟನೆಯಲ್ಲಿ 10 ಜನರು ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಐವರು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ತೀವ್ರ ಗಾಯಗಾಯಗೊಂಡ 5 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ









