ತಮಿಳಿನ ಖ್ಯಾತ ಹಾಸ್ಯ ನಟ ವಿವೇಕ್ vivek ಇನ್ನಿಲ್ಲ
ಚೆನ್ನೈ : ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ vivek ಇಂದು ಬೆಳಗಿನ ಜಾವ ಸುಮಾರು 4.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಗುರುವಾರ ವಿವೇಕ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.
ಈ ಹಿನ್ನೆಲೆ ಅವರನ್ನ ಚೆನ್ನೈನ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವೈದ್ಯರು ಆರೋಗ್ಯ ಸ್ಥಿತಿ ಪರೀಕ್ಷಿಸಿದಾಗ ಹೃದಯಾಘಾತವಾಗಿರುವುದು ತಿಳಿದು ಬಂದಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು.
ವೈದ್ಯರು ಆರೋಗ್ಯ ಪರೀಕ್ಷಿಸಿದ ನಂತರ ವಿವೇಕ್ ಅವರು ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ವಿವೇಕ್ ಅವರು ತಮಿಳು ಚಿತ್ರರಂಗದಲ್ಲಿ ಬಹುಬೇಡಿಕೆಯ ಹಾಸ್ಯ ನಟರಾಗಿದ್ದರು. ಅವರು 220 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಅವರಿಗೆ ಭಾರತ ಸರ್ಕಾರ 2009 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.










